ಬೀದಿ ಪಾಲಾಗಿರುವ ಪ್ರಾಣಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Posted on: February 14, 2018

Z HOTTEYANDA PARVATHI
ಮಡಿಕೇರಿ : ನಗರದಲ್ಲಿ ಜಾನುವಾರುಗಳು ಹಾಗೂ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಗರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರ ಮಹಿಳಾ ಕಾಂಗ್ರೆಸ್‍ನ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಬೆಳ್ಯಪ್ಪ (ಫ್ಯಾನ್ಸಿ) ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕಳೆದ ಹಲವು ದಿನಗಳಿಂದ ನಗರದಲ್ಲಿ ಜಾನುವಾರುಗಳು ಮತ್ತು ನಾಯಿಗಳ ಓಡಾಟ ಹೆಚ್ಚಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಕುಪ್ರಾಣಿಗಳನ್ನು ಬೀದಿಪಾಲು ಮಾಡಿರುವ ಮಾಲೀಕರುಗಳು ತಮ್ಮ ತಮ್ಮ ಪ್ರಾಣಿಗಳನ್ನು ಮನೆಯಲ್ಲಿಟ್ಟು ಸಾಕಬೇಕೆ ಹೊರತು ಸಾರ್ವಜನಿಕರಿಗೆ ತೊಂದರೆ ನೀಡಬಾರದೆಂದು ಹೇಳಿದ್ದಾರೆ. ಬೀದಿಯಲ್ಲಿರುವ ಪ್ರಾಣಿಗಳನ್ನು ಮರಳಿ ಮನೆಗೆ ಸೇರಿಸಿಕೊಳ್ಳದಿದ್ದಲ್ಲಿ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ನಗರಸಭೆಗೆ ದೂರು ನೀಡಲಾಗುವುದೆಂದು ಪಾರ್ವತಿ ಬೆಳ್ಯಪ್ಪ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *