ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ರಾಜ್ಯದ ಮುಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿ.ಎ.ಜೀವಿಜಯ ವಿಶ್ವಾಸ

Posted on: February 21, 2018

sdpr 21 JDS sabhe

ಸಿದ್ದಾಪುರ: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಹೆಚ್.ಡಿ. ಕುಮಾರಸ್ವಾಮಿರವರು ಮುಂದಿನ ಮುಖ್ಯಮಂತ್ರಿ ಆಗುವುದು ಖಚಿತವೆಂದು ಮಾಜಿ ಸಚಿವ ಹಾಗೂ ಮಡಿಕೇರಿ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿ ಬಿ.ಎ.ಜೀವಿಜಯನವರು ವಿಶ್ವಾಸ ವ್ಯಕ್ತಪಡಿಸಿದರು. ಹೊಸಪಟ್ಟಣದ ಸಮುದಾಯ ಭವನದಲ್ಲಿ ಏರ್ಪಡಿಸಲಾದ ನೆಲ್ಯಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಗುಡ್ಡೆಹೊಸೂರು, ಕಂಬಿಬಾಣೆ, ಹೊಸಕೋಟೆ ಗ್ರಾಮಗಳ ಸ್ಥಾನೀಯ ಸಮಿತಿ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ಯಾವುದೇ ಅಭಿವೃದ್ದಿ ಆಗಿಲ್ಲ ಈ ಹಿನ್ನಲೆಯಲ್ಲಿ ರಾಜ್ಯದ ಜನರು ಪ್ರಾದೇಶಿಕ ಪಕ್ಷವಾದ ಜೆ.ಡಿಎಸ್.ನತ್ತ ಒಳವು ತೋರಿದ್ದು ಮುಂದಿನ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷವು ಅತ್ಯಧಿಕ ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತವೆಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ಜೆ.ಡಿ.ಎಸ್. ಪಕ್ಷದ ಸಮಾವೇಶದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದು ಇಂತಹ ಜನಸ್ತೋಮ ಯಾವುದೇ ಪಕ್ಷದ ಸಮಾವೇಶದಲ್ಲಿ ಈವರೆಗೂ ಕಂಡುಬಂದಿರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆದ್ದಲ್ಲಿ ರೈತರ ಸಾಲಮನ್ನ, ಬಡವರ ಪಿಂಚಣಿಯನ್ನು ರೂ.5,000 ಏರಿಸುವ ಗುರಿಯನ್ನು ಹೊಂದಿದ್ದಾರೆ ಎಂದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನಗತ್ಯವಾಗಿ ಜನರ ಮೇಲೆ ತೆರಿಗೆ ವಿದಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಹೊಸ ಯುಗ ಪ್ರಾರಂಭವಾಗುತ್ತದೆಂದರು. ಮಾಯದೇವಿರವರು ಪಕ್ಷಕ್ಕೆ ಬೆಂಬಲ ನೀಡಿದ್ದು ಆನೆಬಲ ಬಂದಂತಾಗಿದೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ರಾಜಕೀಯ ಪಕ್ಷಗಳಿಂದ ರಾಜ್ಯದ ಜನರು ಬ್ರಮನಿರಸನಗೊಂಡಿದ್ದಾರೆಂದು ಟೀಕಿಸಿದರು.

ರಾಜ್ಯ ಜೆ.ಡಿ.ಎಸ್. ಪರಿಶಿಷ್ಟ ಜಾತಿ, ಪಂಗಡದ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತನಾಡಿ ರಾಜ್ಯದಲ್ಲಿ 20 ತಿಂಗಳ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಡವರಿಗೆ, ರೈತರಿಗೆ ಅನುಕೂಲವಾಗುವ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆಂದರು. ಬಡವರಿಗೆ ಹಕ್ಕು ಪತ್ರ ಹಾಗೂ ಲಾಟರಿ ಸರಾಯಿ ನಿಷೇದದಂತ ಉತ್ತಮ ಯೋಜನೆಗಳನ್ನು ಬಡವರಿಗೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ್ಪದಿಂದ ವರ್ತಿಸುತ್ತಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಜೈಲಿಗೆ ಹೋಗಿ ಬಂದಿದ್ದಾರೆಂದು ಟೀಕಿಸಿದರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ಸಂದರ್ಭದಲ್ಲಿ ರೈತರ ಸಾಲಮನ್ನ ಮಾಡಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿಗಳು ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ, ಪಂಡಗಳ ಜನಾಂಗದವರಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತರಳಿಲ್ಲವೆಂದು ಆರೋಪಿಸಿದರು. ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಜೆ.ಡಿ.ಎಸ್. ಪಕ್ಷ ಬಲವರ್ದನೆಗೊಳ್ಳುತ್ತಿದ್ದು ಜಿಲ್ಲೆಯ 2 ಸ್ಥಾನಗಳು ಜೆ.ಡಿಎಸ್. ಪಕ್ಷ ಜಯಗಳಿಸುವುದೆಮದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಹುಲಿ ಅಥಾವ ಕಾಡಾನೆ ಧಾಳಿ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಸಂಕೇತ್ ಪೂವಯ್ಯನವರು ಸ್ಥಳಕ್ಕೆ ಭೇಟಿ ನೀಡಿ ತನ್ನ ವೈಯುಕ್ತಿಕವಾಗಿ ಧನ ಸಹಾಯ ನೀಡುತ್ತಿರುವುದು ಹಾಗೂ ಸ್ಪಂದಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಜೆ.ಡಿ.ಎಸ್. ಅಧ್ಯಕ್ಷ ಸಿ.ಎಲ್ .ವಿಶ್ವ ಮಾತನಾಡಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋಲು ಅನುಭವಿಸಿದ ಜೀವಿಜಯನವರು ಈ ಬಾರಿ ಅತ್ಯಧಿಕ ಮತಗಳಿಂದ ಜಯಗಳಿಸುವುದು ಖಚಿತವೆಂದರು. ಅಲ್ಲದೇ ಜೀವಿಜಯನವರು ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕರ್ತರು ಪಕ್ಷವನ್ನು ಸಂಘಟಿಸಲು ತೋಡಗಿಸಿಕೊಳ್ಳಬೇಕೆಂದು ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಾಡಿದ್ದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಜೆ.ಡಿ.ಎಸ್. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಎಂ.ಬಿ. ಗಣೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಪಕ್ಷ ತೊರೆದು ಹಲವಾರು ಮಂದಿ ಜೆ.ಡಿ.ಎಸ್. ಪಕ್ಷಕ್ಕೆ ಸೇರ್ಪಡೆಗೊಂಡರು. ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷ ಶಿವದಾಸ್, ಜಿ.ಪಂ. ಮಾಜಿ ಸದಸ್ಯ ಶಾಂತ್‍ಕುಮಾರ್, ಗ್ರಾ.ಪಂ. ಸದಸ್ಯರಾದ ಡೆನ್ನಿಬೋರಸ್, ತಮ್ಮಯ್ಯ, ಚಂದ್ರವತಿ, ವಿವಿಧ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳಾದ ಮುಂಡ್ರುಮನೆ ಸುಧೀಶ್, ಕೆ.ಇ. ಲಿಂಗುರಮೇಶ, ಆಲೆಕ್ಸ್, ಹರೀಶ್, ಶಿವಪ್ಪ, ತಳೂರ್‍ಚೇತನ್, ಕೊಳಂಬೆ ವಿನೋದ್, ಮಹಮ್ಮದ್‍ಆಲಿ, ಯು.ಜಿ.ಭರತ್, ಮುನೀರ್, ಮುಸ್ತಫ, ಇತರರು ಹಾಜರಿದ್ದರು. ಜಾಶೀರ್ ಸ್ವಾಗತಿಸಿ ವಿಶ್ವ ವಂದಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *