ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ

Posted on: February 19, 2018

 

Puttanaiah 750ಮಂಡ್ಯ: ರೈತನಾಯಕ. ಹೋರಾಟಗಾರ, ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ(69) ಅವರು ಭಾನುವಾರ ರಾತ್ರಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುಟ್ಟಣ್ಣಯ್ಯ ನಿಧನದಿಂದ ಮಂಡ್ಯ ಮಾತ್ರವಲ್ಲದೆ ಇಡೀ ಕರ್ನಾಟಕದ ರೈತರು ಶೋಕ ಸಾಗರದಲ್ಲಿ ಮುಳುಗುವಂತಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಶ್ರೀಕಂಠೇಗೌಡ ಮತ್ತು ಶಾರದಮ್ಮ ದಂಪತಿಗಳ ಪುತ್ರರಾಗಿ 1949ರಲ್ಲಿ ಜನಿಸಿದರು. ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಸ್ಥಳೀಯವಾಗಿ ಮುಗಿಸಿ ಕಾಲೇಜು ಶಿಕ್ಷಣವನ್ನು ಮೈಸೂರಿನ ಸೆಂಟ್ ಫಿಲೋಮಿನಾ ಮತ್ತು ಡಿ.ಬನುಮಯ್ಯ ಕಾಲೇಜಿನಲ್ಲಿ ಮುಗಿಸಿದ್ದರು.

ರೈತರ ಕುಟುಂಬದಲ್ಲಿ ಜನಿಸಿದ್ದರಿಂದ ರೈತರ ಸಂಕಷ್ಟಗಳನ್ನು ಚೆನ್ನಾಗಿಯೇ ಅರಿತಿದ್ದರು. ಅದಕ್ಕಾಗಿ ರೈತರ ಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರಲ್ಲದೆ, 1983ರಲ್ಲಿ ರೈತ ಸಂಘಕ್ಕೆ ಕಾರ್ಯಕರ್ತನಾಗಿ ಸೇರ್ಪಡೆಗೊಂಡರು. ಅಲ್ಲಿಂದ ಹೋರಾಟದ ಮುಂಚೂಣಿಯಲ್ಲಿದ್ದ ಅವರು ಹಂತಹಂತವಾಗಿ ಬೆಳೆಯುತ್ತಾ ಹೋದರಲ್ಲದೆ, ರೈತ ಸಂಘಟದ ಪ್ರಮುಖ ನಾಯಕನಾಗಿ ಗುರುತಿಸಿಕೊಳ್ಳುತ್ತಾ ರೈತಪರ ಹೋರಾಟವನ್ನು ಮಾಡುತ್ತಾ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. 1994ರಲ್ಲಿ ರಾಜಕೀಯಕ್ಕೆ ಧುಮುಕಿದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ ಸೋಲು ಕಂಡರಾದರೂ 2013ರಲ್ಲಿ ಜೆಡಿಎಸ್ ನ ಪುಟ್ಟರಾಜು ಅವರನ್ನು ಸೋಲಿಸಿ ಗೆಲುವು ಪಡೆದಿದ್ದರು.

ಪುಟ್ಟಣ್ಣಯ್ಯ ಅವರ ಪುತ್ರಿ, ಮೊಮ್ಮಕ್ಕಳು ವಿದೇಶದಲ್ಲಿರುವ ಕಾರಣ ಪಾರ್ಥಿವ ಶರೀರವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿರಿಸಿ ಬುಧವಾರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಪುಟ್ಟಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ, ನಟ ಅಂಬರೀಶ್, ಸಂಸದ ಪುಟ್ಟರಾಜು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *