ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಆದ್ಯತೆ ಸಂಕೇತ್ ಪೂವಯ್ಯ

Posted on: February 23, 2018

23 npk-1

ನಾಪೋಕ್ಲು  : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೋತೆಗೆ ಅನುಧಾನವನ್ನು ಕೊಡಿಸಲು ಮತ್ತು ಗ್ರಾಮೀಣ ಕ್ರೀಡಾಪಟು ಮತ್ತು ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲು ಶತ ಪ್ರಯತ್ನ ಮಾಡಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮತ್ತು ವಿರಾಜಪೇಟೆ ವಿಧಾನ ಸಭಾ ಕ್ರೇತ್ರದ ಜೆಡಿಎಸ್ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಭರವಸೆ ನೀಡಿದರು.

ಸ್ಥಳೀಯ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಸ್ಥಳೀಯ ಡೆಕ್ಕನ್ ಯೂತ್ ಕ್ಲಬ್‍ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಅಗಮಿಸಿ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾ ಪಟುಗಳಿಗೆ ಮೂಲಭೂತ ಸೌಲಭ್ಯದ ಕೊರತೆಯಿದೆ.

ಕ್ರೀಡಾ ಪ್ರಾಧಿಕಾರ ನಿಷ್ಕ್ರೀಯವಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ರೀಡೆಗೆ ಮತ್ತು ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯ ನೀಡುವದರೊಂದಿಗೆ ಕ್ರೀಡಾ ಪ್ರಾಧಿಕಾರವನ್ನು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು ಎಂದ ಅವರು ಗ್ರಾಮೀಣ ಕ್ರೀಡಾ ಪಟುಗಳನ್ನು ವೈಜ್ಞಾನಿಕವಾಗಿ ಗುರುತಿಸುವ ಕಾರ್ಯವನ್ನು ಕೈಗೊಳ್ಳುವದರೊಂದಿಗೆ ಪ್ರತಿಭೆಗಳಿಗೆ ಸರಿಯಾದ ಅವಕಾಶ ಮತ್ತು ತರಬೇತಿಯನ್ನು ನೀಡಲು ಎಲ್ಲಾ ವ್ಯವಸ್ಥೆಯನ್ನು ನಮ್ಮ ಸರಕಾರ ಮಾಡಲಿದೆ ಎಂದರು. ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವಂತಹ ಕ್ರೀಡಾ ಪಟುಗಳಿದ್ದು, ಅವರನ್ನು ಗುರುತಿಸು ಮತ್ತು ಪ್ರೊತ್ಸಾಹಿಸುವ ಕಾರ್ಯವಾಗುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ಅವರು ಸರಕಾರ ಮಾಡಬೇಕಾದ ಕೆಲಸವನ್ನು ಸ್ಥಳೀಯ ಯೂತ್ ಕ್ಲಬ್‍ಗಳು ಮಾಡುತ್ತಿರುವದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೆಕ್ಕನ್ ಯೂತ್ ಕ್ಲಬ್‍ನ ಅಧ್ಯಕ್ಷ ಮತ್ತು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ಮನ್ಸೂರ್ ಅಲಿ ವಹಿಸಿದರು. ವೇದಿಕೆಯಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಾಶೀರ್, ಮಡಿಕೇರಿ ತಾಲೋಕು ಅಧ್ಯಕ್ಷ ಮುಸ್ತಾಫ, ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ.ರಶೀದ್, ಅಬೂಬಕ್ಕರ್, ಸುಲೈಮಾನ್, ಶಿನಾನ್ ಇದ್ದರು.

ಇಸ್ಮಾಯಿಲ್ ಪ್ರೆಂಡ್ಸ್ ತಂಡ (ಮಂಗಳೂರು) ಪ್ರಥಮ ಸ್ಥಾನ ಪಡೆದು ಟ್ರೋಫಿ ಮತ್ತು ನಗದು ಬಹುಮಾನ 22,222/- ಪಡೆದರೆ, ಇಮ್ರಾನ್ ಪ್ರೆಂಡ್ಸ್ (ಮೂಡಬಿದಿರೆ) ದ್ವಿತೀಯ ಸ್ಥಾನ ಪಡೆದು ಟ್ರೀಫಿಯೊಂದಿಗೆ ನಗದು ಬಹುಮಾನ 11,111/- ವನ್ನು ಗಳಿಸಿತು. ಮತ್ತು ಖುರೈಶಿ ಪ್ರೆಂಡ್ಸ್ ತಂಡ ತೃತೀಯ ಬಹುಮಾನ ಪಡೆಯಿತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *