ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವಿರಾಜಪೇಟೆ ನೂತನ ತಾಲ್ಲೂಕು ಆಡಳಿತ ಭವನ ಉದ್ಘಾಟನೆ

Posted on: February 19, 2018

DSC03356
ಮಡಿಕೇರಿ : ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಿಸಿರುವ ತಾಲ್ಲೂಕು ಆಡಳಿತ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಭಾನುವಾರ ಉದ್ಘಾಟಿಸಿದರು.

ಬಳಿಕ ನೂತನ ತಾಲ್ಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಸರ್ಕಾರ ಕೊಡಗು ಜಿಲ್ಲೆಗೆ ನೂರಾರು ಕೋಟಿ ರೂಗಳನ್ನು ನೀಡಿದೆ. 300 ಕೋಟಿಗೂ ಹೆಚ್ಚು ಅನುದಾನವನ್ನು ವಿಶೇಷ ಪ್ಯಾಕೇಜ್‍ನಡಿ ನೀಡಿದೆ ಎಂದರು.

DSC03361ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರ ಪ್ರಯತ್ನದಿಂದ 94ಸಿ ಮತ್ತು 94ಸಿಸಿ ರಡಿ ಹಕ್ಕುಪತ್ರಗಳನ್ನು ಬಡವರಿಗೆ ವಿತರಿಸಲಾಗುತ್ತಿದೆ. ನಮ್ಮದು ‘ನುಡಿದಂತೆ ನಡೆಯುವ’ ಸರ್ಕಾರ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 10 ಸಾವಿರಕ್ಕೂ ಹೆಚ್ಚು ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಉಳಿದಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತಾಗಬೇಕು ಎಂದು ಸಚಿವರು ಹೇಳಿದರು.

ವಿರಾಜಪೇಟೆ ತಾಲ್ಲೂಕಿನಲ್ಲಿ 1530 ಅರ್ಜಿಗಳು ಬಾಕಿ ಇದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಸಿ ಮತ್ತು ಡಿ ಭೂಮಿಯಡಿಯೂ ಸಹ ಹಕ್ಕುಪತ್ರ ವಿತರಿಸಲು ಪ್ರಯತ್ನಿಸಲಾಗುವುದು. ಈ ಭಾಗದ ಜನರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಎಂ.ಆರ್.ಸೀತಾರಾಂ ಅವರು ನುಡಿದರು.

DSC03367

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೊನ್ನಪ್ಪ, ತಹಶೀಲ್ದಾರರಾದ ಗೋವಿಂದರಾಜು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಜಿ.ಪಂ.ತಾ.ಪಂ.ಹಾಗೂ ಪಟ್ಟಣ ಪಂಚಾಯತ್ ಸದಸ್ಯರು ಇದ್ದರು.

DSC03363

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *