ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಶಾರೀರಿಕ ಬೌದ್ಧಿಕ ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಗಳು ಸೂಕ್ತ ಪ್ರಮಾಣದಲ್ಲಿ ಪ್ರಕಟಗೊಂಡಾಗ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯಾಗುತ್ತದೆ ಡಾ.ಮಾಧವ

Posted on: February 3, 2018

2npk-1

ನಾಪೋಕ್ಲು : ಶಾರೀರಿಕ ಶಕ್ತಿ,ಬೌದ್ಧಿಕ ಶಕ್ತಿ,ನೈತಿಕ ಶಕ್ತಿ ಹಾಗೂ ಆಧ್ಯಾತ್ಮಿಕ ಶಕ್ತಿಗಳು ಸೂಕ್ತ ಪ್ರಮಾಣದಲ್ಲಿ ಪ್ರಕಟಗೊಂಡಾಗ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಮಾಧವ ಹೇಳಿದರು.

ಸಮೀಪದ ಹೊದವಾಡ ಗ್ರಾಮದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.ಪರಿಪೂರ್ಣ ವ್ಯಕ್ತಿತ್ವ ಅಗಾಧವಾಗಿದೆ.ಉತ್ತಮ ವ್ಯಕ್ತಿತ್ವವನ್ನು ರೂಢಿಸಿಕೊಂಡು ಜನಾಂಗ ಶಕ್ತಿಶಾಲಿಯಾಗಿದ್ದರೆ ರಾಷ್ಟ್ರ ಶಕ್ತಿಶಾಲಿಯಾಗಿರುತ್ತದೆ.ಜನಾಂಗ ಸುಸಂಸ್ಕ್ರತವಾಗಿದ್ದರೆ ರಾಷ್ಟ್ರವೂ ಸಂಸ್ಕ್ರತಿ ಸಂಪನ್ನವಾಗಿರುತ್ತದೆ.ಯುವಜನರು ನಾಲ್ಕು ಶಕ್ತಿಗಳ ಮರ್ಮವನ್ನರಿತು ಪರಿಪೂರ್ಣ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ದೃಢಸಂಕಲ್ಪ ಮಾಡಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮನೋಜ್ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲರಾದ ಡಾ. ಕಾವೇರಿಪ್ರಕಾಶ್, ಶಿಬಿರಾಧಿಕಾರಿ ಬಿ.ಎಸ್.ವಿನೋದ್,ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಎ.ಹಂಸ,ಉಪನ್ಯಾಸಕಿ ಗೀತಾ ಮತ್ತಿತರರು ಉಪಸ್ಥಿತರಿದ್ದರು.ಕೋಲಾರದ ಜಾದುಗಾರ ಕಿಶೋರ್ ಜಾದೂ ಪ್ರದರ್ಶನ ನೀಡಿದರು.ಬಳಿಕ ಶಿಬಿರಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ಜರುಗಿತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *