ಅಪರಿಚಿತ ಯುವತಿಯ ಮೃತದೇಹ ಪತ್ತೆ ಕೊಲೆ ಶಂಕೆ

Posted on: March 23, 2018

HASAN DEATH
ಹಾಸನ : ಅಪರಿಚಿತ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಹಾಸನ ತಾಲೂಕಿನ ಕಲ್ಕೆರೆಯ ರಸ್ತೆ ಬದಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ‌‌ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 22 ವರ್ಷ ಪ್ರಾಯದ ಯುವತಿಯ ಮೃತದೇಹ ಪತ್ತೆಯಾಗಿದ್ದು.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *