ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ್ ಮೇರಿ ವಿರುದ್ಧ ಅರೆಸ್ಟ್ ವಾರೆಂಟ್

Posted on: March 11, 2018

PRIYANKA MERಉಡುಪಿ: ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ವಿರುದ್ಧ ವಿಶೇಷ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

ಈ ಕುರಿತು ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ.

ಕೋರ್ಟ್ ಜಿಲ್ಲಾಧಿಕಾರಿಗೆ ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿತ್ತು.

ಮಾಹಿತಿ ನೀಡಲು ವಿಫಲವಾದ್ದರಿಂದ ಬಂಧನ ವಾರೆಂಟ್ ಹೊರಡಿಸಿದೆ. ಇದೀಗ ಜಿಲ್ಲಾ ಎಸ್ ಪಿಗೆ ವಾರೆಂಟ್ ತಲುಪಿದೆ. ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಜಾಮೀನಿಗೆ ಪ್ರಯತ್ನಿಸುತ್ತಿದ್ದು, ಮಾರ್ಚ್ 13ರಂದು ನ್ಯಾಯಾಲಯದಲ್ಲಿ ಹಾಜರಾಗಲು ನಿರ್ಧರಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *