ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

Posted on: March 14, 2018

DSC03869
ಮಡಿಕೇರಿ : ನಗರದ ಸನ್ನಿಸೈಡ್‍ನಲ್ಲಿ ನಿರ್ಮಾಣವಾಗುತ್ತಿರುವ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಂಗಳವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಸುತ್ತ ನಿರ್ಮಾಣವಾಗುತ್ತಿರುವ ಸುತ್ತುಗೋಡೆ, ಯುದ್ಧ ಸ್ಮಾರಕ, ಯುದ್ಧ ಟ್ಯಾಂಕ್, ಯುದ್ಧ ವಿಮಾನ ಇಡುವ ಸ್ಥಳ, ಸ್ವಾಗತ ಕಮಾನು ಮತ್ತಿತರ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಹುಟ್ಟುಹಬ್ಬವು ಇದೇ ಮಾರ್ಚ್ 31 ರಂದು ಇರುವುದರಿಂದ ಯುದ್ಧ ಸ್ಮಾರಕ ಕೆಲಸವನ್ನು ಮಾರ್ಚ್ 20 ರೊಳಗೆ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.DSC03872

ಉತ್ತಮ ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು, ಅನಗತ್ಯ ವೆಚ್ಚಗಳಿಗೆ ಅವಕಾಶ ನೀಡದೆ ಕಾಮಗಾರಿ ಕೈಗೊಳ್ಳುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಅವರು ಮಾತನಾಡಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕವನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಸಲಹೆ ಮಾಡಿದರು.

ಮೇಜರ್ ಬಿದ್ದಂಡ ನಂಜಪ್ಪ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಸುತ್ತ ಹಸಿರು ವಾತಾವಣರದಿಂದ ಕೂಡಿರಬೇಕು. ಯಾವುದೇ ಕಾರಣಕ್ಕೂ ಕಾಂಕ್ರೀಟ್ ಮಯವಾಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಅವರು ಸಲಹೆ ಮಾಡಿದರು.

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಸ್ಮಾರಕ ಭವನದ ಸುತ್ತುಮುತ್ತ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಕರಿಯಪ್ಪ ಇತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *