Posted on: March 16, 2018
ಮಡಿಕೇರಿ: ಕಾಫಿ ತೋಟಗಾರಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ವಿರಾಜಪೇಟೆಯ ಬಡಗರಕೇರಿ ಸಮೀಪ ನಡೆದಿದೆ.
ಅನ್ನಿರಾ ಹರೀಶ್(50) ಆತ್ಮಹತ್ಯೆ ಮಾಡಿಕೊಂಡವರು. ಇವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದಿದ್ದಾರೆ. ಇವರಿಗೆ ಪತ್ನಿ ಹಾಗೂ ಒಬ್ಬ ಮಗನಿದ್ದಾನೆ ಎಂದು ತಿಳಿದುಬಂದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.