ಪತ್ನಿಯನ್ನು ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ

Posted on: March 7, 2018

TWO-DEAD-IN-SUSPECTED-MURDER-SUICIDE ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಹತ್ಯೆ-ಆತ್ಮಹತ್ಯೆ ಪ್ರಕರಣ ಪತ್ನಿಯನ್ನು ಕೊಲೆಗೈದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರಪೇಟೆ ತಾಲೂಕಿನ ಗೌಡಳ್ಳಿಯಲ್ಲಿ ನಡೆದಿದೆ.

ಗೌಡಳ್ಳಿ ಗ್ರಾಮದ ಅಂಥೋಣಿ(37) ಪತ್ನಿ ಅರ್ಚನಾ(30) ಮೃತ ದಂಪತಿಗಳು. ನೆನ್ನೆ ರಾತ್ರಿ ಪತಿ-ಪತ್ನಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದಿತ್ತು ಈ ಸಂದರ್ಭ ಪತ್ನಿ ಅರ್ಚನಾಳ ಕುತ್ತಿಗೆ ಹಗ್ಗದಿಂದ ಬಿಗಿದು ಹತ್ಯೆಗೈದ ಪತಿ ಅಂಥೋಣಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆಯಿಂದ ಮನೆಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಸ್ಥಳೀಯರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರ್ಚನಾ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ನಿವಾಸಿಯಾಗಿದ್ದು.  ಘಟನಾ ಸ್ಥಳಕ್ಕೆ ಭೇಟಿನೀಡಿದ ಶನಿವಾರಸಂತೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ದಂಪತಿಗಳು ಗಂಡು ಮಗುವನ್ನು ಅಗಲಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *