ಬ್ರೇಕಿಂಗ್ ನ್ಯೂಸ್
ಕ್ಷಯರೋಗದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಇರಲಿ ಕಾವೇರಮ್ಮ ಸೋಮಣ್ಣ , ಜನರಲ್ ತಿಮ್ಮಯ್ಯ ಹುಟ್ಟುಹಬ್ಬ ಅಚ್ಚುಕಟ್ಟಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ , ಬೇಲೂರು ಶಾಸಕ ರುದ್ರೇಶಗೌಡ ನಿಧನ , ಮರೀಚಿಕೆಯಾದ ಕೊಟ್ಟಿಗೆ ಹಣ ಗ್ರಾ.ಪಂ ವಿರುದ್ಧ ಜಿ.ಪಂ ಸಿಇಒ ಗೆ ದಸಂಸ ದೂರು , 1 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ , ಕೊಡಗಿನ ಶಾಸಕರು ಜಿಲ್ಲೆಯನ್ನು ಅಭಿವೃದ್ಧಿಪಡಿಸಿದ್ದಲ್ಲಿ ಶಾಸಕರಿಗೆ ಟಿಕೆಟ್ ನೀಡಲು ಬಿಜೆಪಿಯ ವಿಳಂಭ ಯಾಕೆ ಸಂಕೇತ್ ಪೂವಯ್ಯ , ಮುದ್ರಕರು ಹಾಗೂ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ , ತಮಿಳು ಅತಿ ಹಿರಿಯ ಭಾಷೆ ದ್ರಾವಿಡ ಭಾಷಾ ಕುಟುಂಬಕ್ಕಿದೆ 4500 ವರ್ಷಗಳ ಇತಿಹಾಸ , ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ , ಅಪರಿಚಿತ ಯುವತಿಯ ಮೃತದೇಹ ಪತ್ತೆ ಕೊಲೆ ಶಂಕೆ ,

ಪ್ರತಿಯೊಬ್ಬರಿಗೂ ಕಾನೂನು ಅರಿವು ಇರಬೇಕು ಮಹಾಸ್ವಾಮೀಜಿ

Posted on: March 14, 2018

Z-THARABETHI-1
ಮಡಿಕೇರಿ : ಹುಟ್ಟಿನಿಂದ ಸಾಯುವ ತನಕ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಅರ್‍ಕೆಜೆಎಂಎಂ ಮಹಾಸ್ವಾಮೀಜಿ ಅವರು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾನೂನಿನ ತಿಳುವಳಿಕೆ ಇಲ್ಲದ ಸಮಾಜವನ್ನು ಊಹಿಸುವುದು ಅಸಾಧ್ಯ. ಆದರೂ ಕಾನೂನಿನ ಬಗ್ಗೆ ಜ್ಞಾನವಿದ್ದರೂ ಸಹ ಸಮಾಜದಲ್ಲಿ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು ಎಂದರು.

ಕಾನೂನು, ಶಿಕ್ಷಣ, ಆರೋಗ್ಯ ಕಡೆ ವಿಶೇಷ ಗಮನಹರಿಸಬೇಕಿದೆ. ಕಾನೂನು ಸೇವಾ ಪ್ರಾಧಿಕಾರದ ಪ್ರಯೋಜನದ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಜಿಲ್ಲಾ ಸೆಷನ್ ನ್ಯಾಯಾಧೀಶರು ಹೇಳಿದರು. Z-THARABETHI-2

ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಅವರು ಆರೋಗ್ಯವೇ ಭಾಗ್ಯ. ಆರೋಗ್ಯವಿದ್ದಲ್ಲಿ ಚಲನಶೀಲತೆ ಮತ್ತು ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಕಡೆ ಗಮನಹರಿಸಬೇಕಿದೆ ಎಂದರು.

ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ಮೇಲ್ವಿಚಾರಕರಾದ ಸುನೀತಾ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಅಪರ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ ಕಾಮತ, ನ್ಯಾಯಾಧೀಶರಾದ ಲೋಕೇಶ ಇತರರು ಇದ್ದರು. ಜಯಪ್ಪ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *