ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವೈವಿದ್ಯಮಯ ಸಂಸ್ಕೃತಿಯೊಂದಿಗೆ ಕೊಡಗಿನ ಕ್ರೀಡಾಪಟುಗಳಿಗೂ ಉತ್ತೇಜನ ಅಗತ್ಯ ಸಂಕೇತ್ ಪೂವಯ್ಯ

Posted on: March 14, 2018
IMG_20180313_212508
ಸಿದ್ದಾಪುರ : ವಿಶಿಷ್ಟ ಸಂಸ್ಕೃತಿಯನ್ನು ಹೊಂದಿರುವ ಕೊಡಗು ಕ್ರೀಡಾ ಕ್ಷೇತ್ರಕ್ಕೂ ಅದ್ಭುತ ಕೊಡುಗೆಯನ್ನು ನೀಡಿದ್ದು, ಪ್ರತಿಭಾನ್ವಿತ ಪ್ರತಿಭೆಗಳಿಗೆ ಸರಕಾರದ ಪ್ರೋತ್ಸಾಹ ಅಗತ್ಯವಿದೆ ಎಂದು ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.
ಇಲ್ಲಿನ ಚರ್ಚ್ ಸಭಾಂಗಣದಲ್ಲಿ ನಡೆದ ಕೆಸಿಎಲ್ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಸಿಎಲ್ ಕ್ರೀಡಾಕೂಟವು ಇಡೀ ರಾಜ್ಯಕ್ಕೆ ಮಾದರಿ ಕ್ರೀಡಾಕೂಟವಾಗಿದ್ದು, ಇಲ್ಲಿ ಅಂತರಾಷ್ಟ್ರೀಯ ಗುಣಮಟ್ಟವನ್ನು ಕಾಣಬಹುದಾಗಿದೆ.IMG_20180313_104900
ಸಮಾನತೆ ಮತ್ತು ಏಕತೆಯನ್ನು ಸಾರುವ ಇಂತಹ ಕ್ರೀಡಾಕೂಟಗಳಿಗೆ ನಾಡಿನ ಜನ ಸ್ಪಂದಿಸಿ ಸಹಕಾರ ನೀಡಬೇಕಾಗಿದೆ ಎಂದು ಹೇಳಿದ ಅವರು, ರಾಜ್ಯ ಸರಕಾರವು ನಗರ ಪ್ರದೇಶದ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ ಕಲ್ಪಿಸಿ ಕೊಡುತ್ತಿದ್ದು, ಗ್ರಾಮೀಣ ಪ್ರದೇಶದ ಪ್ರತಿಭೆಗಳು ಅವಕಾಶ ವಂಚಿತರಾಗಿದ್ದಾರೆ, ರಾಜ್ಯ ಕ್ರೀಡಾ ಇಲಾಖೆ ಈ ಬಗ್ಗೆ ಸೂಕ್ತ ಯೋಜನೆಯನ್ನು ರೂಪಿಸಬೇಕಿದ್ದು, ವೈಜ್ಞಾನಿಕ ಸಮೀಕ್ಷೆಯ ಮೂಲಕ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಕೈ ಜೋಡಿಸಬೇಕೆಂದರು.
IMG_20180313_105954
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಪಿ.ಸಿ ಹಸೈನಾರ್ ಹಾಜಿ ಮಾತನಾಡಿ, ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಐ ಪಿ ಎಲ್ ಮಾದರಿಯ ಪಂದ್ಯಾವಳಿ ಸಿದ್ದಾಪುರದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದ ಅವರು, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.IMG_20180313_212403
ಈ ಸಂದರ್ಭ ವೇದಿಕೆಯಲ್ಲಿ ಕೆಸಿಎಲ್ ಸಮಿತಿಯ ಅಧ್ಯಕ್ಷ ಸುರೇಶ್ ಬಿಳಿಗೇರಿ, ಸಂಚಾಲಕರಾದ ರಜಿತ್ ಕುಮಾರ್ ಗುಹ್ಯ, ಅಜೀಜ್, ಮುಬಾರಕ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎನ್ ವಾಸು, ದಾನಿಗಳಾದ ಶಾಫಿ, ಜಂಶೀದ್, ಪ್ರಮುಖರಾದ ಅಫ್ಸಲ್, ಶೌಕತ್, ಕಲೀಲ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *