ಅಂಬರೀಶ್‌ಗೆ ಟಿಕೆಟ್‌ ಮಂಡ್ಯ ಕಾಂಗ್ರೆಸಿನಲ್ಲಿ ಭುಗಿಲೆದ್ದ ಭಿನ್ನಮತ ಕಾಂಗ್ರಸ್ ಕಚೇರಿ ಧ್ವಂಸ

Posted on: April 16, 2018

mandya-1523872532

ಮಂಡ್ಯ : ಅಂಬರೀಶ್‌ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಂಡ್ಯ ಕಾಂಗ್ರೆಸ್‌ನಲ್ಲಿ ಬಂಡಾಯ ಭುಗಿಲೆದ್ದಿದ್ದು, ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ರವಿಕುಮಾರ್ ಗಣಿಗ ಬೆಂಬಲಿಗರು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

ಗಣಿಗ ರವಿ ಅವರು ಈ ಬಾರಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿದ್ದರು. ಅದಕ್ಕೆ ತಕ್ಕಂತೆ ಅಂಬರೀಶ್ ಅವರು ಕೂಡಾ ಟಿಕೆಟ್‌ಗೆ ಅರ್ಜಿ ಸಲ್ಲಿಸಿರಲಿಲ್ಲ, ಆದರೆ ಹಠಾತ್ ಬೆಳವಣಿಗೆಯಲ್ಲಿ ಅಂಬರೀಶ್ ಅವರಿಗೆ ಟಿಕೆಟ್ ಘೋಷಣೆ ಆಗಿದ್ದು, ಇದೀಗ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಪ್ರಾರಂಭವಾಗಿದೆ.
ಗಣಿಗ ರವಿ ಅವರು ಕಳೆದ ಚುನಾವಣೆಯಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು, ಆಗ ಅಂಬರೀಶ್‌ ಅವರು ‘ಇದು ನನ್ನ ಕೊನೆಯ ಚುನಾವಣೆ’ ಎಂದು ಹೇಳಿ ಗಣಿಗ ರವಿ ಅವರನ್ನು ಟಿಕೆಟ್ ರೇಸ್‌ನಿಂದ ತಪ್ಪಿಸಿದ್ದರು ಎನ್ನಲಾಗಿದೆ. ಆದರೆ ಈ ಬಾರಿ ಮತ್ತೆ ಅವರೇ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಗಣಿಗ ರವಿ ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗಣಿಗ ರವಿ ಅವರು, ‘ಅಂಬರೀಶ್ ನನಗೆ ಮೋಸ ಮಾಡಿದ್ದಾರೆ, ನಾನು ಅವರ ವಿರುದ್ಧ ಪಕ್ಷೇತರವಾಗಿ ಕಣಕ್ಕಿಳಿಯುತ್ತೇನೆ’ ಎಂದು ಘೋಷಿಸಿದ್ದಾರೆ. ‘ಅಂಬರೀಶ್‌ ಅರ್ಜಿ ಹಾಕದೇ ಇದ್ದರೂ ಟಿಕೆಟ್ ಕೊಟ್ಟಿದ್ದಾರೆ, ನಾನು ಅರ್ಜಿ ಹಾಕಿದ್ದರೂ ನನಗೆ ಟಿಕೆಟ್ ಕೊಟ್ಟಿಲ್ಲ, ಅಂಬರೀಶ್ ಕ್ಷೇತ್ರಕ್ಕೆ ಬರದೇ ಇದ್ದರೂ ಅವರ ಪ್ರಚಾರ ಮಾಡಿ ಗೆಲ್ಲಿಲಿಸಿದ್ದೆ, ಆದರೆ ಅವರು ನನಗೆ ಮೋಸ ಮಾಡಿದರು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಂಡ್ಯದ ಎ.ಸಿ. ಮಾದೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ (ಏ.17) ರಂದು ತಮ್ಮ ಹಿತೈಷಿಗಳ ಸಭೆ ಕರೆದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ರವಿ ಗಣಿಗ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *