ಆಸಿಫಾ ಅತ್ಯಾಚಾರ ಪ್ರಕರಣ ಹೇಯ ಕೃತ್ಯ ಮಹಿಳಾ ಕಾಂಗ್ರೆಸ್ ಖಂಡನೆ

Posted on: April 16, 2018

24-4
ಮಡಿಕೇರಿ : ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ ನಡೆದ ಅಪ್ರಾಪ್ತ ಬಾಲಕಿ ಆಸಿಫಾಳ ಮೇಲಿನ ಅತ್ಯಾಚಾರ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಒತ್ತಾಯಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಮಹಿಳಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷರಾದ ಜಿ.ಆರ್.ಪುಷ್ಪಲತಾ ಅಮಾನವೀಯ ರೀತಿಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಿಂದಾಗಿ ನಾಗರೀಕ ಸಮಾಜವೇ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಸಂಸ್ಕøತಿಗೆ ದಕ್ಕೆ ತರುವ ಪ್ರಯತ್ನ ಇದಾಗಿದ್ದು ಇಡೀ ಮಹಿಳಾ ಸಮೂಹ ಈ ಕೃತ್ಯವನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅಭದ್ರತೆ ಕಾಡುತ್ತಿದ್ದು ಭಯದ ವಾತಾವರಣದ ನಡುವೆ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಘೋರ ಮನೋಸ್ಥಿತಿಯ ವ್ಯಕ್ತಿಗಳಿಂದಾಗಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ಮುಂದಾಗಬೇಕೆಂದು ಪುಷ್ಪಲತಾ ಒತ್ತಾಯಿಸಿದ್ದಾರೆ.

ತಪ್ಪಿತಸ್ಥರಿಗೆ ಗಲ್ಲು ಶಿಕ್ಷ ವಿಧಿಸಬೇಕೆಂದು ಆಗ್ರಹಿಸಿರುವ ಅವರು ತನಿಖೆಯ ಹಾದಿಯನ್ನು ತಪ್ಪಿಸಿದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ದೇಶವ್ಯಾಪಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದೆಂದು ಎಚ್ಚರಿಕೆಯನ್ನು ನೀಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *