ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಆಸಿಫಾ ಹತ್ಯೆ ಅಮಾನವೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ

Posted on: April 17, 2018

Z K.A.YAKUB 3
ಮಡಿಕೇರಿ : ಇತ್ತೀಚೆಗೆ ಕಾಶ್ಮೀರದ ಕಥುವಾದಲ್ಲಿ ನಡೆದ ಅಪ್ರಾಪ್ತ ಬಾಲಕಿ ಆಸಿಫಾಳ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಅಮಾನವೀಯ ಎಂದು ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕೂಬ್ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಅತ್ಯಾಚಾರ ಪ್ರಕರಣದಿಂದಾಗಿ ನಾಗರೀಕ ಸಮಾಜವೇ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಗೌರವಕ್ಕೆ ದಕ್ಕೆ ತರುವ ಹೇಯ ಕೃತ್ಯ ಇದಾಗಿದ್ದು ಕೃತ್ಯವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅಭದ್ರತೆ ಕಾಡುತ್ತಿದ್ದು, ಆತಂಕದಲ್ಲೇ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಕೃತ ಮನೋಸ್ಥಿತಿಯ ವ್ಯಕ್ತಿಗಳಿಂದಾಗಿ ದೌರ್ಜನ್ಯ, ಅತ್ಯಾಚಾರ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕೆಂದು ಯಾಕೂಬ್ ಒತ್ತಾಯಿಸಿದ್ದಾರೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗದಿದ್ದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ದೇಶವ್ಯಾಪಿ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *