ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಏಕಕಾಲದಲ್ಲಿ ರಜೆ ನೀಡಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಒತ್ತಾಯ

Posted on: April 17, 2018

anaganwadiಮಡಿಕೇರಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಪ್ರತ್ಯೇಕ ದಿನಗಳಲ್ಲಿ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಇಬ್ಬರಿಗೂ ಒಂದೇ ಅವಧಿಯಲ್ಲಿ ರಜೆ ನೀಡಬೇಕೆಂದು ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಒತ್ತಾಯಿಸಿದೆ.

ಮೇ 2 ರಿಂದ 16 ರವರೆಗೆ ಸಹಾಯಕಿಯರಿಗೆ ಹಾಗೂ ಮೇ 17 ರಿಂದ 31 ರವರೆಗೆ ಕಾರ್ಯಕರ್ತೆಯರಿಗೆ ತಲಾ 15 ದಿನಗಳಂತೆ ರಜೆಯನ್ನು ಘೋಷಿಸಲಾಗಿದೆ. ಆದರೆ ಮೇ 2 ರಿಂದ 16 ರ ಅವಧಿಯಲ್ಲಿ ಕೆಲವು ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯವೂ ಇದೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಒಬ್ಬೊಬ್ಬರಾಗಿ ಕಾರ್ಯ ನಿರ್ವಹಿಸಲು ಕಷ್ಟವಾಗಲಿದೆ.

ಆದ್ದರಿಂದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮೇ 16 ರಿಂದ 31 ರವರೆಗೆ ಏಕಕಾಲದಲ್ಲಿ ರಜೆಯನ್ನು ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನವಿ ಮಾಡಿಕೊಂಡಿರುವುದಾಗಿ ಸಂಘದ ಅಧ್ಯಕ್ಷರಾದ ವಿ.ಹೆಚ್.ನಾಗರತ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *