ಏ.21 ರಂದು ನವೋದಯ ಶಾಲೆ ಪ್ರವೇಶ ಪರೀಕ್ಷೆ

Posted on: April 17, 2018

jawahar-navodaya-vidyalaya
ಮಡಿಕೇರಿ : ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಏಪ್ರಿಲ್ 21 ರಂದು ಬೆಳಗ್ಗೆ 11.30 ಗಂಟೆಗೆ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ನಡೆಯಲಿದೆ. ಈಗಾಗಲೇ ಅರ್ಜಿಯನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಸಲ್ಲಿಸಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.

ಪ್ರವೇಶ ಪತ್ರಗಳನ್ನು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಸಂಬಂಧಪಟ್ಟ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಜವಾಹರ ನವೋದಯ ವಿದ್ಯಾಲಯ ಗಾಳಿಬೀಡು ಇಲ್ಲಿಂದ ನೇರವಾಗಿ ಪಡೆಯಬಹುದು.

ಪರೀಕ್ಷಾ ಮಂಡಳಿಯು ನಿಗದಿಪಡಿಸಿದಂತೆ ಪರೀಕ್ಷೆಯು ಬೆಳಗ್ಗೆ 11.30 ಕ್ಕೆ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಗ್ಗೆ 10.30 ಗಂಟೆಯೊಳಗೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ತಡವಾಗಿ ಬಂದಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ದೊರಯುದಿಲ್ಲ ಎಂದು ಜವಹಾರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *