ಏ.27 ರಂದು ರಾಹುಲ್ ಗಾಂಧಿ ಗೋಣಿಕೊಪ್ಪಕ್ಕೆ ಭೇಟಿ

Posted on: April 21, 2018

Rahul-Gandhi
ಮಡಿಕೇರಿ  :  ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಇದೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಕೆ.ಪಿ.ಸಿ.ಸಿಯ ಹಿರಿಯ ಉಪಾಧ್ಯಕ್ಷರಾದ ಮಿಟ್ಟು ಚಂಗಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಇದೇ ಏ.27 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೋಣಿಕೊಪ್ಪಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಿಮಿತ್ತ ಆಗಮಿಸಲಿದ್ದು, ಗೋಣಿಕೊಪ್ಪಲಿನ ದಸರಾ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಏ.18 ರಂದು ಎ.ಐ.ಸಿ.ಸಿ ಕಾರ್ಯದರ್ಶಿ ವಿಷ್ಣುನಾಥನ್ ಅವರು ರಾಜ್ಯಸಭಾ ಸದಸ್ಯರಾದ ಚಂದ್ರಶೇಖರ್, ರಾಹುಲ್ ಗಾಂಧಿ ಆಪ್ತವಲಯದ ಬಿಜೊಯ್ ಹಾಗೂ ತಾವು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಿವುಮಾದಪ್ಪ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದು, ರಾಹುಲ್ ಗಾಂಧಿ ಅವರ ಭೇಟಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಲ್, ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ ಸೇರಿದಂತೆ ರಾಷ್ಟ್ರಮಟ್ಟದ ಮತ್ತು ರಾಜ್ಯಮಟ್ಟದ ನಾಯಕರುಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತು ಸಾವಿರ ಜನ ಸೇರುವ ನೀರಿಕ್ಷೆ ಇದೆ ಎಂದು ಮಿಟ್ಟುಚಂಗಪ್ಪ ತಿಳಿಸಿದ್ದಾರೆ.
ಕೆಪಿಸಿಸಿ ಉಸ್ತುವಾರಿ ವೆಂಕಟಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ, ಅಬ್ದುಲ್ ಸಲಾಂ, ಅಪ್ರು ರವೀಂದ್ರ, ವಕ್ತಾರ ಟಾಟು ಮೊಣ್ಣಪ್ಪ, ಹಿಂದುಳಿದ ವರ್ಗದ ಅಧ್ಯಕ್ಷರಾದ ಸರ ಚಂಗಪ್ಪ, ರಾಜೀವ್ ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರ ಮೈನಾ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ್ ಕುಟ್ಟಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳ ಪರಿಶೀಲನೆ ಸಂದರ್ಭ ಹಾಜರಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *