ಪ್ರಬುದ್ಧ ನೌಕರರ ಒಕ್ಕೂಟದಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ

Posted on: April 17, 2018

20 ಮಡಿಕೇರಿ : ಕೊಡಗು ಜಿಲ್ಲಾ ಪ್ರಬುದ್ಧ ನೌಕರರ ಒಕ್ಕೂಟದ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗ

ರದ ಅಶೋಕಪುರದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಒಕ್ಕೂಟದ ಸಲಹೆಗಾರರಾದ ಡಾ.ದೇವದಾಸ್ ಉದ್ಘಾಟಿಸಿ ಡಾ.ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷರಾದ ಡಾ.ಸತೀಶ್ ಕುಮಾರ್ ಭಾರತ ದೇಶ ಸರ್ವ ಜನಾಂಗಗಳ ಶಾಂತಿಯ ತೋಟವಾಗಿದ್ದು, ಇದರ ರಕ್ಷಣೆಗಾಗಿ ಡಾ.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸರ್ವರಿಗೂ ಸಮಪಾಲು ಮತ್ತು ಸಮಬಾಳು ಎನ್ನುವ ಅಂಶಗಳನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಹಿರಿಯರಾದ ಮುತ್ತಪ್ಪ ಮಾತನಾಡಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಕೊಡುಗೆಗಳನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳುವ ಮೂಲಕ ಆದರ್ಶನ ಜೀವನ ಸಾಗಿಸಬೇಕೆಂದು ಕರೆ ನೀಡಿದರು.
ಒಕ್ಕೂಟದ ಪ್ರಮುಖರಾದ ಚಂದನ್, ರಾಮ್‍ದಾಸ್, ವರದರಾಜ್, ಸಿದ್ದಾರಾಜು, ಬೆಳ್ಯಪ್ಪ, ದಿವಾಕರ್ ಮತ್ತಿತರರು ಉಪಸ್ಥಿತರಿದ್ದು ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.21-5

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *