ಬಾಲಕಿ ಮೇಲಿನ ಅತ್ಯಾಚಾರ ಹತ್ಯೆಗೆ ನಗರ ಕಾಂಗ್ರೆಸ್ ಖಂಡನೆ

Posted on: April 17, 2018

Z K.U.ABDUL RAZAK 2 (1)
ಮಡಿಕೇರಿ : ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಅಮಾಯಕ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಕಾಂಗ್ರೆಸ್ ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್ ಇತ್ತೀಚಿನ ವರ್ಷಗಳಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ಸಂಘರ್ಷ, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರಗಳು ಹೆಚ್ಚಾಗುತ್ತಿದ್ದು, ಸಮಾಜ ಭಯದ ವಾತಾವರಣದಲ್ಲಿದೆ ಮತ್ತು ಸುರಕ್ಷತೆಯೇ ಇಲ್ಲದಾಗಿದೆ ಎಂದು ಆರೋಪಿಸಿದ್ದಾರೆ.

ಬಾಲಕಿಯ ಹತ್ಯೆ ಪ್ರಕರಣ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪವಾಗಿದ್ದು, ದೇಶ ತಲೆ ತಗ್ಗಿಸುವಂತಹ ಪರಿಸ್ಥಿತಿ ಬಂದೊದಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅಮಾನವೀಯ ಕೃತ್ಯಗಳನ್ನು ತಡೆಯಲು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *