ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಮಕ್ಕಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ ಮಿಶ್ರ

Posted on: April 17, 2018

kultiutgykgk
ಮಡಿಕೇರಿ : ಬೇಸಿಗೆ ಶಿಬಿರವು ಮಕ್ಕಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಗೆ ಉತ್ತಮ ವೇದಿಕೆಯಾಗಿದೆ ಎಂದು ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಅಭಿಪ್ರಾಯಪಟ್ಟಿದ್ದಾರೆ.
ನಗರದ ಬಾಲಕಿಯರ ಬಾಲಮಂದಿರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ “ಕಲಿಕೆಗೊಂದು ವೇದಿಕೆ” ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳು ಪರೀಕ್ಷೆ ಮುಗಿದ ನಂತರ ಮನೆಯಲ್ಲಿ ಕಾಲಹರಣ ಮಾಡದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿರುವ ಬೇಸಿಗೆ ಶಿಬಿರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಆಗ್ನಿಶಾಮಕ ಅಧಿಕಾರಿ ಚಂದನ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನೀರಿನ ರಕ್ಷಣೆ ಬಗ್ಗೆ ಮಕ್ಕಳಿಗೆ ತಿಳಿಸಿ, ಬೆಂಕಿಯಿಂದ ಆಗುವ ಅನಾಹುತಗಳ ಬಗ್ಗೆ ಮಾಹಿತಿ ನೀಡಿದರು.
ಅರಣ್ಯ ರಕ್ಷಣೆ ಬಗ್ಗೆ ಮತ್ತು ಪ್ಲಾಸ್ಟಿಕ್‍ನಿಂದ ಪರಿಸರಕ್ಕೆ ಉಂಟಾಗುವ ಅನಾಹುತಗಳ ಬಗ್ಗೆ ಮಾಹಿತಿ ನೀಡಿದ ಚಂದನ್ ಅವರು ಕಸವನ್ನು ಬೇರ್ಪಡಿಸಿ ಮರು ಬಳಕೆ ವಸ್ತುಗಳನ್ನಾಗಿ ಪರಿವರ್ತಿಸಿ ಬಳಸುವ ಬಗ್ಗೆ, ಹಾಗೂ ಗೊಬ್ಬರವನ್ನಾಗಿ ಮಾಡಿ ಗಿಡ ಮರಗಳಿಗೆ ಉಪಯೋಗಿಸುವಂತೆ ಮಾಹಿತಿ ನೀಡಿದರು.

ಶಾಲೆಯಲ್ಲಿ ಕಲಿತ ವಿದ್ಯೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.
ನೀನಾಸಂ ಕಲಾವಿದರಾದ ಸುನೀಲ್ ಅವರು ಮಾತನಾಡಿ ಶಿಬಿರದಲ್ಲಿ ಓದಿನ ಬಗ್ಗೆ ಹಾಡು, ಕುಣಿತ, ನಾಟಕ ಮತ್ತಿತರ ಕಲಿಕೆಗಳನ್ನು ಶಿಬಿರದಲ್ಲಿ ಹೇಳಿ ಕೊಡಲಾಗುವುದು ಹಾಗೂ ಕಸದಿಂದ ಆಗುವ ಕಲೆಗಳ ಬಗ್ಗೆ ತಿಳಿಸಿ, ಮಕ್ಕಳಿಗೆ ಚಿತ್ರಕಲೆ, ಸಂಗೀತ ಮತ್ತು ಇಷ್ಟವಾದ ಕಲಿಕೆಗಳ ಬಗ್ಗೆ ತಿಳಿಸಿಕೊಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಮ್ತಾಜ್ ಅವರು 15 ದಿನಗಳು ನಡೆಯುವ ಬೇಸಿಗೆ ಶಿಬಿರದಲ್ಲಿ ಮಕ್ಕಳನ್ನು ಯಾವ ರೀತಿ ತೊಡಗಿಸಿಕೊಳ್ಳಬೇಕು, ಮಕ್ಕಳು ಈ ದಿನಗಳಲ್ಲಿ ತುಂಬಾ ಉತ್ಸಾಹದಿಂದ ಪಾಲ್ಗೊಳ್ಳುವಂತೆ ತಿಳಿಸಿದರು.

ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ಅವಕಾಶವಿದೆ ಹಾಗೂ ಮಕ್ಕಳಲ್ಲಿ ಇರುವ ಕೌಶಲ್ಯವನ್ನು ಅನಾವರಣ ಗೊಳಿಸುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ, ಕಾವೇರಿ ಮಕ್ಕಳ ಗೃಹ, ಮಡಿಕೇರಿ ಹಾಗೂ ವಿವಿಧ ಶಾಲೆಯ ಮಕ್ಕಳು ಹೀಗೆ ಒಟ್ಟು 110 ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಕಲೆ, ಸಾಹಿತ್ಯ, ಸಂಗೀತ, ನೃತ್ರ, ಯೋಗ, ಕಸದಿಂದ ರಸ, ವ್ಯಕ್ತಿತ್ವ ವಿಕಸನ ಹೀಗೆ ಹಲವು ರೀತಿಯ ಚಟುವಟಿಕೆಗಳು ನಡೆಯಲಿವೆ.

ಕೆ.ಎಲ್.ಪ್ರಿಯ, ಸಜಿತ್, ಹರೀಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಬಾಲಕಿಯರ ಬಾಲಮಂದಿರ ಹಾಗೂ ಬಾಲಕರ ಬಾಲಮಂದಿರದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಭಾವತಿ ಅವರು ವಂದಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *