ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಮೌಳಿ ಬಿ ಫಾರಂಗೆ ತಡೆ

Posted on: April 17, 2018

chandramouli
 ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಮೌಳಿ ಬಿ ಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ತಡೆಹಿಡಿದಿದ್ದಾರೆ. ಪಿಎನ್​ಬಿ ಹಗರಣದ ಆರೋಪಿ ಉದ್ಯಮಿ ನೀರವ್‌ ಮೋದಿ ಸಂಬಂಧಿ ಮೆಹುಲ್‌ ಚೋಕ್ಸಿ ಪರ ಚಂದ್ರಮೌಳಿ ವಕಾಲತ್ತು ವಹಿಸಿದ್ದರು ಎಂದು ಆರೋಪಿಸಲಾಗಿತ್ತು.

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿ ನಾಪಂಡ ಮುತ್ತಪ್ಪ ಆರೋಪ ಮಾಡಿದ್ದರು. ಹೀಗಾಗಿ, ತಕ್ಷಣಕ್ಕೆ ಚಂದ್ರಮೌಳಿಗೆ ಮಡಿಕೇರಿ ಕ್ಷೇತ್ರದ ಟಿಕೆಟ್ ನೀಡದಿರಲು ತೀರ್ಮಾನ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ. ಪ್ರಕರಣದ ಗಂಭೀರತೆಯನ್ನು ಅರಿತು ಚಂದ್ರಮೌಳಿಗೆ ಬಿ ಫಾರಂ ನೀಡುವುದನ್ನು ತಡೆ ಹಿಡಿಯಲಾಗಿದೆ. ಈ ಕುರಿತು ಮಾಹಿತಿ ಪಡೆಯಲು ಚಂದ್ರಮೌಳಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರವರನ್ನು ​ ಭೇಟಿ ಮಾಡಲು ತಿಳಿಸಲಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *