ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸರ್ಕಾರಿ ನೌಕರರ ಅಕ್ರಮ ಆಸ್ತಿ ಬಗ್ಗೆ ಎಸಿಬಿಗೆ ಮಾಹಿತಿ ಕೊಡಲು ಡಿವೈಎಸ್ಪಿ ಮನವಿ

Posted on: April 17, 2018

acb_somvarpete

ಸೋಮವಾರಪೇಟೆ: ಸರ್ಕಾರಿ ನೌಕರ ಲಂಚ ಪಡೆಯುವುದು ಹಾಗು ನೌಕರನ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಸೂಕ್ತ ಮಾಹಿತಿಯಿದ್ದವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಲಿಖಿತ ಅಥವಾ ಮೌಖಿಕ ದೂರು ಸಲ್ಲಿಸಬಹುದು ಎಂದು ಎಸಿಬಿ ಡಿವೈಎಸ್ಪಿ ಎಚ್.ಎಂ. ಶೈಲೇಂದ್ರ ಹೇಳಿದರು.

ಇಲ್ಲಿನ ಪ್ರತಿಕಾಭವನದಲ್ಲಿ ಎಸಿಬಿ ವತಿಯಿಂದ ನಡೆದ ಭ್ರಷಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರು ಸ್ವೀಕರಿಸುವ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯಾವುದೆ ಸರ್ಕಾರಿ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ, ಸಾರ್ವಜನಿಕರು ಎಸಿಬಿಗೆ ದೂರು ಸಲ್ಲಿಸಬಹುದು ಎಂದು ಹೇಳಿದರು.

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಜಾಸ್ತಿಯಾಗಿರುವ ಬಗ್ಗೆ ದೂರುಗಳು ಹೆಚ್ಚಾಗಿದ್ದು, ಇದು ಲಂಚದ ಹಾವಳಿ ಹೆಚ್ಚಾಗಲು ಕಾರಣವಾಗಿದೆ. ಮೇಲಾಧಿಕಾರಿಗಳು ಮಧ್ಯವರ್ತಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಹೀಗೆ ಮುಂದುವರಿದೆ ಅಧಿಕಾರಿಗಳು ಜವಾಬ್ದಾರರಾಗಬೇಕಾಗುತ್ತದೆ ಎಂದು ಹೇಳಿದರು.

ಕಚೇರಿಗೆ ಹಾಜರಾಗುವ ಸಂದರ್ಭ ಅಧಿಕಾರಿಗಳು ಹಾಗು ನೌಕರರು ಹಣದೊಂದಿಗೆ ಕರ್ತವ್ಯಕ್ಕೆ ಹಾಜರಾಗಬಾರದು. ಹಣವಿದ್ದರೆ ಮುಂಚಿತವಾಗಿಯೇ ಸಕಾರಣ ಕೊಟ್ಟು ಡೈರಿಯಲ್ಲಿ ದಾಖಲಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ನೌಕರರು ಅಧಿಕಾರಿಗಳ ಹೆಸರು ಹೇಳಿಕೊಂಡು ಲಂಚ ಸ್ವೀಕರಿಸಿರುವುದು ಸಾಬೀತಾದರೆ, ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಅಧಿಕಾರಿಗಳು ಕೈಕೆಳಗಿನ ನೌಕರರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸರ್ಕಾರಿ ನೌಕರರಿಗೆ ಸರ್ಕಾರ ಸಂಬಳ ಕೊಡುವುದು ಸಾರ್ವಜನಿಕರ ಕೆಲಸವನ್ನು ನಿಗದಿತ ಸಮಯದಲ್ಲಿ ಮಾಡಿಕೊಡಲು. ಆದರೆ ಸಾರ್ವಜನಿಕರನ್ನು ಲಂಚಕೋಸ್ಕರ ಸತಾಯಿಸಿವುದು ಮಾಮೂಲಿಯಾಗಿದೆ. ಇದು ಅಕ್ಷಮ್ಯ ಅಪರಾಧವಾಗಿದೆ. ಕಾನೂನು ಬಲಿಷ್ಠವಾಗಿದ್ದು, ಲಂಚಕೋರರು ಪ್ರತಿಸಲ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಭೆಯಲ್ಲಿ ತಹಸೀಲ್ದಾರ್ ವೀರೇಂದ್ರ ಬಾಡಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಚಿಟ್ಟಿಯಪ್ಪ, ಎಸಿಬಿ ಇನ್ಸ್ ಪೆಕ್ಟರ್ ಗಳಾದ ಎಂ.ಮಹೇಶ್, ಎಂ.ದೊಡ್ಡೇಗೌಡ, ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *