ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕೊನೆಗೂ ಗೌಡರ ಮನೆ ಕದತಟ್ಟಿದ ಸಿದ್ದರಾಮಯ್ಯ

Posted on: May 15, 2018

siddu gowdaಬೆಂಗಳುರು : ಚುನಾವಣಾ ಪ್ರಚಾರದಲ್ಲಿ ಸತತವಾಗಿ ದೇವೇಗೌಡ ಅವರನ್ನು ಟೀಕಿಸುತ್ತಿದ್ದ ಸಿದ್ದರಾಮಯ್ಯ ಅವರು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಇಂದು ಅದೇ ದೇವೇಗೌಡ ಅವರನ್ನು ಭೇಟಿ ಆಗಲು ಹೊರಟಿದ್ದಾರೆ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿರುವ ಬೆನ್ನಲ್ಲೆ ಸಿದ್ದರಾಮಯ್ಯ ಅವರು ದೇವೇಗೌಡ ಅವರ ಭೇಟಿಗೆ ಅವರ ನಿವಾಸಕ್ಕೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರನ್ನು ತಮ್ಮ ಮನೆ ಬಾಗಿಲಿಗೆ ಕರೆಸಿಕೊಳ್ಳುವ ಮೂಲಕ ದೇವೇಗೌಡರು ರಾಜಕೀಯವಾಗಿ ಗೆಲುವು ಸಾಧಿಸಿದ್ದಾರೆ ಎಂದೇ ಈ ಭೇಟಿಯನ್ನು ವಿಶ್ಲೇಷಿಸಬಹುದಾಗಿದೆ.xkumaraswamy-1526386470.jpg.pagespeed.ic.a-v5O2Si0W

ಜೆಡಿಎಸ್ ಮತ್ತು ಕಾಂಗ್ರೆಸ್‌ ಪಕ್ಷವು ಮೈತ್ರಿ ಸರ್ಕಾರ ರಚಿಸುತ್ತಿರುವ ಬೆನ್ನಲ್ಲೆ ರಾಜಕೀಯ ಮತ್ತು ಆಡಳಿತಾತ್ಮಕ ವಿಚಾರಗಳ ಚರ್ಚೆಗೆಂದು ಸಿದ್ದರಾಮಯ್ಯ ಅವರು ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ. ರಾಜಕೀಯ ವಿರೋಧಿಗಳೆನಿಸಿಕೊಂಡಿರುವ ಇಬ್ಬರು ನಾಯಕರ ಪರಸ್ಪರ ಭೇಟಿ ಅತ್ಯಂತ ಕುತೂಹಲ ಕೆರಳಿಸಿದೆ.

ಕಾವೇರಿ ವಿವಾದ ಉಲ್ಬಣಿಸಿದ್ದಾಗ ಸಿದ್ದರಾಮಯ್ಯ ಅವರು ಬಯಸಿ-ಬಯಸಿ ದೇವೇಗೌಡ ಅವರನ್ನು ಭೇಟಿ ಆಗಿದ್ದರು, ಅಲ್ಲದೆ ಅವರ ನೇತೃತ್ವದಲ್ಲೇ ಕಾವೇರಿ ವಿವಾದದ ಬಗ್ಗೆ ಸರ್ವ ಪಕ್ಷ ಸಭೆ ನಡೆಸಿದ್ದರು, ಆ ನಂತರ ಈ ಇಬ್ಬರೂ ನಾಯಕರು ಪರಸ್ಪರ ಭೇಟಿ ಆಗಿಯೇ ಇಲ್ಲ.

ಇದಷ್ಟೆ ಅಲ್ಲ ದೇವೇಗೌಡ ಅವರ ಭೇಟಿ ನಂತರ ಸಿದ್ದರಾಮಯ್ಯ ಅವರು ಇಂದು ಸಂಜೆ ಕುಮಾರಸ್ವಾಮಿ ಅವರನ್ನೂ ಭೇಟಿ ಆಗಿ ಮಾತುಕತೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪುತೃ ಸೇರಿದಂತೆ ಇತರ ತಮ್ಮ ಬೆಂಬಲಿಗರ ಪರ ಸಚಿವ ಸ್ಥಾನಕ್ಕೆ ಲಾಭಿ ನಡೆಸುತ್ತಾರೊ ಅಥವಾ ಇತರೆ ವಿಚಾರಗಳ ಚರ್ಚೆ ಮಾಡುತ್ತಾರೆಯೋ ಕಾದು ನೋಡಬೇಕಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *