ನಿಫಾ ವೈರಸ್‌ ಆತಂಕ ಕೇರಳ ಗಡಿ ಜಿಲ್ಲೆ ಕೊಡಗಿನಲ್ಲಿ ಕಟ್ಟೆಚ್ಚರ

Posted on: May 22, 2018

Nipah-Virus1

ಮಡಿಕೇರಿ: ಕೇರಳದಲ್ಲಿ ನಿಫಾ ವೈರಸ್​​ನಿಂದ ಹಲವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೇರಳದ ಗಡಿ ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹೇಳಿದ್ದಾರೆ.

ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೇರಳದಿಂದ ಹೆಚ್ಚಿನ ಪ್ರವಾಸಿಗರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ. ಮಧ್ಯಾಹ್ನ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಯಲಿದೆ.

ಜಿಲ್ಲೆಯ ಡಿಎಚ್‌ಒ ರಾಜೇಶ್‌ ಪ್ರತಿಕ್ರಿಯಿಸಿ, ಜ್ವರ ಇದ್ದರೆ ಜನ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಇದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆದಿದ್ದೇವೆ. 7 ಬೆಡ್‍ನ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಯಾವುದೇ ಶಂಕಿತ ಪ್ರಕರಣ ಪತ್ತೆಯಾಗಿಲ್ಲ. ಪ್ರಕರಣ ಕಂಡುಬಂದರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ. ಜನ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *