ಮೇ 18 ರಂದು ಉದ್ಯೋಗ ಮೇಳ

Posted on: May 17, 2018

JOB FR
ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಮೇ 18 ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೊಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಹಲವಾರು ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳಲಾಗುವುದು.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಬೇಕೆಂದು ಉದ್ಯೋಗಾಧಿಕಾರಿ ಸಿ.ಜಗನಾಥ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *