ರಾಜಭವನಕ್ಕೆ ಬಿಜೆಪಿ ಮುಖಂಡರ ಭೇಟಿ ಸರ್ಕಾರ ರಚನೆಗೆ ಕಾಲಾವಕಾಶ ಕೋರಿದ ಬಿ.ಎಸ್.ವೈ

Posted on: May 15, 2018

raja bavan
ಬೆಂಗಳೂರು : ರಾಜ್ಯ ರಾಜಕೀಯದ ದಿಢೀರ್ ಬೆಳವಣಿಗೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್, ಜೆಡಿಎಸ್ ಮೈತ್ರಿಗೆ ವೇದಿಕೆ ಸಿದ್ದವಾಗಿದ್ದರೆ, ಮತ್ತೊಂದೆಡೆ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸರ್ಕಾರ ರಚನೆಗೆ ತಮಗೆ ಅವಕಾಶ ಕೊಡಬೇಕೆಂದು ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಕಾಂಗ್ರೆಸ್ ಯತ್ನ ಬಿಎಸ್ ವೈ ಆರೋಪ

ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಬಿಜೆಪಿಗೆ ಜನ ಆಶೀರ್ವಾದ ಮಾಡಿದ್ದಾರೆ. ನಾವೇ ಸರ್ಕಾರ ರಚಿಸುತ್ತೇವೆ. ಆದರೆ ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರಕಾರ ರಚಿಸುವ ಸಲುವಾಗಿ ಬಹುಮತ ಸಾಬೀತಿಗೆ 7 ದಿನ ಕಾಲಾವಕಾಶ ನೀಡುವಂತೆ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ಮನವಿ ಮಾಡಿದ್ದೇವೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *