ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್​ವೈ

Posted on: May 17, 2018

32805046_1922859211111483_3179578076073820160_n
ಬೆಂಗಳೂರು : ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಯಡಿಯೂರಪ್ಪ ಅವರು ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಐವರು ಕೇಂದ್ರ ಸಚಿವರು, ಬಿಜೆಪಿ ಶಾಸಕರು, ಬಿಜೆಪಿ ಹಿರಿಯ ನಾಯಕರು ಪಾಲ್ಗೊಂಡಿದ್ದರು. ರಾಜಭವನದ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.

32897228_1922859354444802_1727064967435255808_nರಾಧಾಕೃಷ್ಣ ದೇಗುಲಕ್ಕೆ ಬಿಎಸ್​ವೈ ಭೇಟಿ
ಡಾಲರ್ಸ್​ ಕಾಲನಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಬಿಎಸ್​ವೈ ಅವರು ಮೊದಲಿಗೆ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಾರಿಗೆ ಮುತ್ತಿಗೆ ಯತ್ನ
ಬಿ.ಎಸ್​. ಯಡಿಯೂರಪ್ಪ ಅವರು ಸಂಜಯನಗರದ ರಾಧಾಕೃಷ್ಣ ದೇಗುಲಕ್ಕೆ ಭೇಟಿ ನೀಡಿ ವಾಪಸ್ಸಾಗುವಾಗ ಕಾಂಗ್ರೆಸ್​ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಸರಳ ಸಮಾರಂಭ
ಬಿ.ಎಸ್​. ಯಡಿಯೂರಪ್ಪ ಅವರ ಪ್ರಮಾಣ ವಚನ ಸಮಾರಂಭ ಸರಳವಾಗಿ ನಡೆಯಲಿದ್ದು, ಕೇಂದ್ರದ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು ಸಮಾರಂಭದಲ್ಲಿ ಭಾಗವಹಿಸಲಿಲ್ಲ.32669008_1922859064444831_678315811533750272_n

ಸಿದ್ಧಗೊಂಡ ಸಿಎಂ ಕಚೇರಿ
ಬಿ.ಎಸ್​. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಆದೇಶ ಬುಧವಾರ ರಾತ್ರಿ ಹೊರಬಿದ್ದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆಯೇ ಮುಖ್ಯಮಂತ್ರಿ ಕಚೇರಿಯನ್ನು ಸ್ವಚ್ಛಗೊಳಿಸಲಾಯಿತು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕಚೇರಿ ಮತ್ತು ಕ್ಯಾಬಿನೆಟ್​ ಕಚೇರಿಯನ್ನು ವಿಧಾನಸೌಧದ ನೌಕರರು ಸ್ವಚ್ಛಗೊಳಿಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *