ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪ್ರತಿಭಟನೆ​

Posted on: May 17, 2018

Congress Protest in Vidhana Soudhaಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್​. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕರು ವಿಧಾನಸೌಧದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಈಗಲ್​ಟನ್​ ರೆಸಾರ್ಟ್​ನಿಂದ ಕಾಂಗ್ರೆಸ್​ ಶಾಸಕರು ಹೊರಟಿದ್ದು, ವಿಧಾನಸೌಧದ ಮುಂಭಾಗ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್​, ವೇಣುಗೋಪಾಲ್​, ಕೇಂದ್ರ ನಾಯಕರಾದ ಗುಲಾಂ ನಬೀ ಆಜಾದ್. ಕಾಂಗ್ರೆಸ್​ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಚಿವ ಈಶ್ವರ್ ಖಂಡ್ರೆ, ಎಂಎಲ್​​ಸಿ ಐವಾನ್ ಡಿಸೋಜಾ ಮತ್ತು ಶಾಸಕ ಜಮೀರ್ ಅಹಮದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *