ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Posted on: May 15, 2018

CM-Siddaramaiah-Resign
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜೂ ಭಾಯಿ ವಾಲಾರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ರಾಜ್ಯಪಾಲ ವಜೂ ಭಾಯಿ ವಾಲಾ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆಂದು ತಿಳಿದು ಬಂದಿದೆ. ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು 1977 ಡಿ.31ರಂದು ಮುಖ್ಯಮಂತ್ರಿಯಾಗಿ ಐದು ವರ್ಷ 286 ದಿನಗಳ ನಿರಂತರವಾಗಿ ಏಕಕಾಲದಲ್ಲಿ ಪೂರ್ಣಗೊಳಿಸಿದ್ದರು. ಆ ನಂತರ ಬಂದಂತಹ ಯಾವ ಮುಖ್ಯಮಂತ್ರಿಗಳು ಕೂಡ ಸುದೀರ್ಘ ಐದು ವರ್ಷ ಅಧಿಕಾರ ಅನುಭವಿಸಲಿಲ್ಲ. ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರೈಸಿ ಸಿ.ಎಂ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *