ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಯನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಮಂತ್ರಿ ಸ್ಥಾನ ನೀಡಿದ್ರು ಸ್ವೀಕರಿಸಲ್ಲ ಸೌಮ್ಯಾ ರೆಡ್ಡಿ

Posted on: June 13, 2018

Sowmyaಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಗೆಲುವಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರು ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿತ್ತು. ಸುಮಾರು 6 ತಿಂಗಳಿನಿಂದ ಜನರ ಕಷ್ಟ-ಸುಖ ಅರಿತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ ಎಂದರು.

ಜನರ ಸೇವೆ ಮಾಡಿ, ಜಯನಗರ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಅದು ಬಿಟ್ಟು ಬೇರೆ ಯಾವುದೇ ನಿರೀಕ್ಷೆ, ಆಸೆಯಿಲ್ಲ. ಸಚಿವ ಸ್ಥಾನ ನೀಡಿದರೆ ಸ್ವೀಕರಿಸಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *