ಜಿಲ್ಲಾದ್ಯಂತ ಬಿಟ್ಟುಬಿಟ್ಟು ಸುರಿಯುತ್ತಿರುವ ಮಳೆ

Posted on: June 21, 2018

rain fallss
ಮಡಿಕೇರಿ  :  ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ಜಿಲ್ಲೆಯ ಹಲವು ಕಡೆಗಳಲ್ಲಿ ಬಿಟ್ಟುಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 17.20 ಮಿ.ಮೀ. ಕಳೆದ ವರ್ಷ ಇದೇ ದಿನ 11.67 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1146.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 491.94ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.05 ಮಿ.ಮೀ. ಕಳೆದ ವರ್ಷ ಇದೇ ದಿನ 13.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1529.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 632.05 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.53 ಮಿ.ಮೀ. ಕಳೆದ ವರ್ಷ ಇದೇ ದಿನ 11.37 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1091.03 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 453.29 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.03 ಮಿ.ಮೀ. ಕಳೆದ ವರ್ಷ ಇದೇ ದಿನ 10.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 818.06 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 390.47 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ :: ಮಡಿಕೇರಿ ಕಸಬಾ 14, ನಾಪೋಕ್ಲು 24.80, ಸಂಪಾಜೆ 36.20, ಭಾಗಮಂಡಲ 41.20, ವಿರಾಜಪೇಟೆ ಕಸಬಾ 24.60, ಹುದಿಕೇರಿ 10, ಶ್ರೀಮಂಗಲ 9.40, ಪೊನ್ನಂಪೇಟೆ 11.20, ಅಮ್ಮತಿ 35, ಬಾಳೆಲೆ 9, ಸೋಮವಾರಪೇಟೆ ಕಸಬಾ 8.80, ಶನಿವಾರಸಂತೆ 4.60, ಶಾಂತಳ್ಳಿ 14.40, ಸುಂಟಿಕೊಪ್ಪ 6.40, ಕುಶಾಲನಗರ 2 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2833.46 ಅಡಿಗಳು, ಕಳೆದ ವರ್ಷ ಇದೇ ದಿನ 2814.60 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 3.40 ಮಿ.ಮೀ. ಕಳೆದ ವರ್ಷ ಇದೇ ದಿನ 2.60 ಮಿ.ಮೀ., ಇಂದಿನ ನೀರಿನ ಒಳಹರಿವು 581 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 146 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *