ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜೂನ್ 21 ವಿಶ್ವ ಯೋಗದಿನ ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ

Posted on: June 13, 2018

DSC05090
ಮಡಿಕೇರಿ : ಅಂತರಾಷ್ಟ್ರೀಯ ಯೋಗ ದಿನವನ್ನು ಇದೇ 21 ರಂದು ಆಯೋಜಿಸುವಂತಾಗಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಜೂನ್ 21 ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಭಂದಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪಾರ ಜಿಲ್ಲಾಧಿಕಾರಿಯವರು ತಿಳಿಸುತ್ತಾ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ ಅವರಿಂದ ಯೋಗ ದಿನಾಚರಣೆಗೆ ಪೂರ್ವ ಭಾವಿಯಾಗಿ ತೆಗೆದುಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ಜೂನ್ 21ರ ಯೋಗ ದಿನಾಚರಣೆಯ ಪ್ರಯುಕ್ತ ಜೂನ್ 17ರಂದು ಭಾನುವಾರ ಯೋಗಾ ಮ್ಯಾರಥಾನ್ ಹಮ್ಮಿಕೊಂಡಿರುವ ಬಗ್ಗೆ ಸಭೆಗೆ ತಿಳಿಸಿದರು. ಈ ಸಂಬಂಧ ಸಭೆಯಲ್ಲಿ ಜೂನ್ 17ರಂದು ಭಾನುವಾರ ಬೆಳಗ್ಗೆ 8 ಘಂಟೆಗೆ ಗಾಂಧಿ ಮೈದಾನದಿಂದ ಯೋಗ ಮ್ಯಾರಥಾನ್ ಚಾಲನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.DSC05089

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಯೋಗ ದಿನಾಚರಣೆಗೆ ಸಂಭಂಧಿಸಿದಂತೆ ಹಲವು ಸಲಹೆಗಳನ್ನು ನೀಡಿದರು.

ಎಸ್.ಡಿ.ಎಂ ಕಾಲೇಜಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಕರಾದ ಡಾ.ಕಾವ್ಯ, ಹೆಗಡೆ ಯೋಗ ಪ್ರದರ್ಶನದ ಮುಖ್ಯ ತರಬೇತಿದಾರರಾದ ಮಹೇಶ್ ಕುಮಾರ್ ಕೆ.ಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಧೆಯ ಜಿಲ್ಲಾ ಪ್ರತಿನಿಧಿಯಾದ ಮುರುಳಿಧರ್ ಹಾಗೂ ರೋಟರಿ ಕ್ಲಬ್‍ನ ಸದಸ್ಯರು ಯೋಗ ದಿನಾಚರಣೆಗೆ ಸಂಭಂಧಿಸಿದಂತೆ ಹಲವು ಮಾಹಿತಿಗಳನ್ನು ಸಭೆಗೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರವೀಶ್ ರವರು ಸಭೆಗೆ ಮಾಹಿತಿ ನೀಡಿ ಕಾಲೇಜಿನ ಎನ್.ಎಸ್.ಎಸ್ ಘಟಕದ ಎಲ್ಲಾ ವಿದ್ಯಾರ್ಥಿಗಳು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಜಿ.ಪಂ.ಉಪ ಕಾರ್ಯದರ್ಶಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ಜನ್ ಡಾ.ಜಗದೀಶ್, ಕೊಡಗು ವೈದ್ಯಕೀಯ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುಳಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಮ್ತಾಜ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನೆಹರು ಯುವ ಕೇಂದ್ರದ ಮುಖ್ಯಸ್ಧರು, ಚಿ.ನಾ.ಸೋಮೇಶ್ ಹಾಗೂ ಜಿಲ್ಲೆಯ ಹಲವು ಸಂಘ ಸಂಸ್ಧೆಗಳ ಪ್ರತಿನಿಧಿಗಳು ಇದ್ದರು. DSC05092

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *