ಜೂ.20 ರಂದು ಉದ್ಯೋಗ ಮೇಳ

Posted on: June 19, 2018

Job+fair1
ಮಡಿಕೇರಿ :  ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 20 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಎರಡನೇ ಮಹಡಿಯಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ರ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಲು ಕೋರಿದೆ.

ಉದ್ಯೋಗಮೇಳದಲ್ಲಿ ಪ್ರತಾಪ್ ಪ್ರತಿಷ್ಠಾನ, ಎಸ್‍ಬಿಐ ಜೀವ ವಿಮೆ, ಪ್ರೆಂಡ್ಲಿ ಮೋಟಾರ್ಸ್, ವೋಕ್ಸ್ ವ್ಯಾಗನ್ ಸಂಸ್ಥೆಗಳು ಭಾಗವಹಿಸಲಿದ್ದು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *