ದಕ್ಷಿಣ ಕೊಡಗಿನಲ್ಲಿ ಅತೀಹೆಚ್ಚು ಮಳೆ 

Posted on: June 13, 2018

WhatsApp Image 2018-06-13 at 5.37.06 PM
ಮಡಿಕೇರಿ  : ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜಿಲ್ಲೆಯ ಶ್ರೀಮಂಗಲದಲ್ಲಿ 320 ಮಿ.ಮೀ.(32 ಸೆಂ.ಮೀ), ಹುದಿಕೇರಿಯಲ್ಲಿ 318 ಮಿ.ಮೀ. ಪೊನ್ನಂಪೇಟೆಯಲ್ಲಿ 225.20 ಮೀ.ಮೀ. ಮತ್ತು ಭಾಗಮಂಡಲದಲ್ಲಿ 131.40 ಮಿ.ಮೀ. ಮಳೆಯಾಗಿದ್ದು, ಕೊಡಗಿನ ದಕ್ಷಿಣ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 102.65 ಮಿ.ಮೀ. ಕಳೆದ ವರ್ಷ ಇದೇ ದಿನ 16.50 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 949.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 423.16 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 102.55 ಮಿ.ಮೀ. ಕಳೆದ ವರ್ಷ ಇದೇ ದಿನ 15.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1225.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 525.85 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 176.32 ಮಿ.ಮೀ. ಕಳೆದ ವರ್ಷ ಇದೇ ದಿನ 22.92 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 883.12 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 398.38 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.08 ಮಿ.ಮೀ. ಕಳೆದ ವರ್ಷ ಇದೇ ದಿನ 10.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 739.88 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 345.26 ಮಿ.ಮೀ. ಮಳೆಯಾಗಿತ್ತು. WhatsApp Image 2018-06-13 at 5.37.33 PM

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ : ಮಡಿಕೇರಿ ಕಸಬಾ 41.80, ನಾಪೋಕ್ಲು 194.40, ಸಂಪಾಜೆ 42.60, ಭಾಗಮಂಡಲ 131.40, ವಿರಾಜಪೇಟೆ ಕಸಬಾ 83.20, ಹುದಿಕೇರಿ 318.50, ಶ್ರೀಮಂಗಲ 320, ಪೊನ್ನಂಪೇಟೆ 225.20, ಅಮ್ಮತಿ 52, ಬಾಳಲೆ 59, ಸೋಮವಾರಪೇಟೆ ಕಸಬಾ 30.20, ಶನಿವಾರಸಂತೆ 19.40, ಶಾಂತಳ್ಳಿ 85, ಕೊಡ್ಲಿಪೇಟೆ 25.20, ಸುಂಟಿಕೊಪ್ಪ 12.30, ಕುಶಾಲನಗರ 2.40 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ 
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2820.12 ಅಡಿಗಳು, ಕಳೆದ ವರ್ಷ ಇದೇ ದಿನ 2810.77 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 7.60 ಮಿ.ಮೀ. ಕಳೆದ ವರ್ಷ ಇದೇ ದಿನ 2.20 ಮಿ.ಮೀ., ಇಂದಿನ ನೀರಿನ ಒಳ ಹರಿವು 5063 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 808 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *