ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಧಗಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್ – ಓರ್ವ ಸಜೀವ ದಹನ 5ಕ್ಕೂ ಹೆಚ್ಚು ಮನೆಗಳು ಭಸ್ಮ

Posted on: June 19, 2018

fire_gail
ಚಿಕ್ಕಮಗಳೂರು : ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 5ಕ್ಕೂ ಹೆಚ್ಚು ಮನೆಗಳು ಧಗಧಗನೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕು ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

ಕಡೂರಿನಿಂದ ಹೊಸದುರ್ಗ ಕಡೆಗೆ ಪೆಟ್ರೋಲ್ ಟ್ಯಾಂಕರ್ ಹೋಗುತ್ತಿತ್ತು. ಈ ವೇಳೆ ಲಾರಿ ಪಕ್ಕದಲ್ಲೇ ಬೈಕ್ ಬಂದಿದ್ದು, ಅಪಘಾತ ತಡೆಯಲು ಹೋಗಿ ಲಾರಿ ಪಲ್ಟಿ ಆಗಿದೆ. ಬೈಕ್ ಮೇಲೆ ಪೆಟ್ರೋಲ್ ಟ್ಯಾಂಕರ್ ಬಿದ್ದಿದೆ.petrol tnk1

ಬೈಕಿನ ಮೇಲೆ ಬಿದ್ದ ಬಳಿಕ ಟ್ಯಾಂಕರ್ ಹೊತ್ತಿ ಉರಿದಿದೆ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಜೀವ ದಹನವಾಗಿದ್ದು. ಚಾಲಕ ಮೈತುಂಬಾ ಬೆಂಕಿ ಮೆತ್ತಿಕೊಂಡೇ ಓಡಿ ಬಂದಿದ್ದಾನೆ. ಸ್ಥಳೀಯರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಳೆ ಬಂದಿದ್ದ ಕಾರಣ ಲಾರಿ ಪಲ್ಟಿ ಹೊಡೆದಿದೆ.

ಅಕ್ಕಪಕ್ಕದಲ್ಲಿ ಮನೆ ಇದ್ದ ಕಾರಣ 5ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿದೆ.ಸ್ಥಳಕ್ಕೆ ಅಗ್ನಿ ಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಸುಮಾರು 100 ಮೀ. ವ್ಯಾಪ್ತಿಯಲ್ಲಿ ಬೆಂಕಿ ಆವರಿಸಿದ್ದು, ಸದ್ಯ ಅಕ್ಕಪಕ್ಕದ ಮನೆಯಲ್ಲಿದ್ದವರು ಹಿಂದಿನ ಬಾಗಿಲಿನಿಂದ ಹೊರ ಬಂದಿದ್ದಾರೆ.tank bl

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *