ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಪರಿಸರ ‘ದಿನಾಚರಣೆ’ಯಾಗಿರದೆ ‘ದಿನ’ಆಚರಣೆಯಾಗಲಿ

Posted on: June 5, 2018

Hand holding and planting new tree with green bokeh background

ಪ್ರತಿ ವರ್ಷ ಜೂನ್ 5ನೇ ದಿನವನ್ನು ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತಿದೆ. ಪರಿಸರ ದಿನಾಚರಣೆಯನ್ನು ಆಚರಿಸಬೇಕೆಂಬ ನಿರ್ಧಾರವನ್ನು 1972-73ರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು. 1974ರಿಂದ ವಿಶ್ವ ಪರಿಸರ ದಿನಾಚರಣೆ ಪ್ರಾರಂಭವಾಯಿತು. ಜೂನ್ 5 ರಂದು  ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ನೆಲ, ಮಣ್ಣು, ಬೆಳೆ, ಹಣ್ಣು ಹಂಪಲು ಹೀಗೆ ಎಲ್ಲವೂ ಮುಂದಿನ ಪೀಳಿಗೆಗೆ ಉಳಿಯುವಂತಾಗಲು ಈ ದಿನವನ್ನು ಜಾಗೃತ ದಿನವೆಂದು ಆಚರಿಸಲಾಗುತ್ತಿದೆ.

ಭಾರತದ ಸಂವಿಧಾನದ 51ನೇ (ಎ ) ಪ್ರಕಾರ ಪರಿಸರ ರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೆಂದು ಉಲ್ಲೇಖಿಸಲಾಗಿದೆ. ಇತರ ಕರ್ತವ್ಯದಂತೆ ಪರಿಸರ ರಕ್ಷಣೆಯ ಕರ್ತವ್ಯವನ್ನು ಅರಿತು, ಭವಿಷ್ಯದ ಉತ್ತಮ ಬದುಕಿಗಾಗಿ ಪ್ರತಿಯೊಬ್ಬರೂ ಸ್ವಜಾಗೃತಿಯನ್ನು ರೂಡಿಸಿಕೊಳ್ಳಬೇಕು.

ಪರಿಸರವು ನಮ್ಮ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಮನುಷ್ಯನ ಬದುಕಿಗಾಗಿ ಎಲ್ಲವನ್ನು ನೀಡುವ ಪರಿಸರವನ್ನು ನಾವು ಕಾಳಜಿಯಿಂದ ಸಸಿಗಳನ್ನು ನೆಟ್ಟು ಬೆಳೆಸಬೇಕು ಹಾಗೂ ಪೋಷಿಸಬೇಕು. ಇದು ಪ್ರತಿಯೊಬ್ಬ ಮಾನವನ ಆದ್ಯ ಕರ್ತವ್ಯ.

ಮನುಷ್ಯನ ಸ್ವಾರ್ಥ ಬದುಕು ಆತನ ಬದುಕನ್ನೇ ನಾಶಮಾಡುತ್ತಿದೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ಕಾಪಾಡಿಕೊಂಡು ಬಂದ ಪರಿಸರವನ್ನು ನಾವು ಕಾಪಾಡಿಕೊಂಡು ಭವಿಷ್ಯಕ್ಕೆ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವ ಸಮುದಾಯಕ್ಕೆ ಇದೆ.

ಎಲ್ಲರೂ ಜಾಗೃತರಾಗೋಣ ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ದಿನವೂ ಆಚರಣೆಯಾಗುವಂತೆ  ಕಾಳಜಿವಹಿಸೋಣ.  ಹಸಿರು ನಮ್ಮೆಲರ ಉಸಿರು, ಮುಂದಿನ ಪೀಳಿಗೆಗಾಗಿ ಕಾಡು ಬೆಳೆಸಿ ನಾಡು ಉಳಿಸೋಣ, ಸ್ವಚ್ಛವಾದ ಪರಿಸರ ನಮ್ಮೆಲರ ಧ್ಯೇಯವಾಗಿರಲಿ.     world-envy-day

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *