ಮಹಾಮಳೆಯ ಅಬ್ಬರಕ್ಕೆ ಭಾಗಮಂಡಲ ಸಂಪೂರ್ಣ ಜಲಾವೃತ – ಜನರ ರಕ್ಷಣೆಗೆ ಧಾವಿಸಿದ ಜಿಲ್ಲಾಡಳಿತ

Posted on: June 14, 2018

  24-9ಮಡಿಕೇರಿ : ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ, ಕೊಡಗು ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ನದಿಮೂಲಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ರೀತಿ ವಾತಾವರಣ ಸೃಷ್ಟಿಯಾಗಿದೆ. ಹಲವೆಡೆಗಳಲ್ಲಿ ರಸ್ತೆ ಸಂಪರ್ಕಗಳು ಸಂಪೂರ್ಣ ಕಡಿತಗೊಂಡಿದ್ದು, ಮಳೆಗೆ ತೀವೃತೆಗೆ ಭಾಗಮಂಡಲ-ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ದೇವಾಲಯದ ಮೆಟ್ಟಿಲಿನವರೆಗೆ ನೀರು ತಲುಪಿದೆ. ಕಳೆದೊಂದು ವಾರದಲ್ಲಿ 2ನೇ ಬಾರಿಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ.25-10

ಪ್ರವಾಹದಿಂದ ಹಲವು ಭಾಗಗಳಲ್ಲಿ ರಸ್ತೆ ಬಂದ್ ಆದ ಹಿನ್ನೆಲೆ ಜಿಲ್ಲಾಡಳಿತ ಜನರನ್ನು ಬೋಟ್​ ಸಹಾಯದಿಂದ ಸ್ಥಳಾಂತರ ಮಾಡುತ್ತಿದ್ದು ಭಾಗಮಂಡಲಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.r

ಕರ್ನಾಟಕ – ಕೇರಳ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಪೆರುಂಬಾಡಿ – ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ 25 ಕಡೆಗಳಲ್ಲಿ ಭೂ ಕುಸಿತವಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜುಲೈ 12ರ ವರೆಗೆ ವಾಹನ ಸಂಚಾರ ನಿಷೇಧಗೊಳಿಸಿ ಡಿಸಿ ಶ್ರೀ ವಿದ್ಯಾ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಬಿಟ್ಟುಬಿಡದೇ ನಿರಂತರವಾಗಿ ಮಳೆ ಆಗುತ್ತಿದೆ. ಮಡಿಕೇರಿಯಲ್ಲಿ ಬುಧವಾರ ರಾತ್ರಿ ನಿಲ್ಲಿಸಿದ್ದ ಕಾರಿನ ಮೇಲೆ ಮಣ್ಣು ಕುಸಿದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಆಗಿಲ್ಲ.WhatsApp Image 2018-06-13 at 11.27.42 PM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *