ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿತಿ ಚಿಂತಾಜನಕ

Posted on: June 13, 2018

 

atal

ನವದೆಹಲಿ : ಅನಾರೋಗ್ಯ ಸಮಸ್ಯೆಗಳಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಮೂತ್ರನಾಳ, ಕೆಳ ಉಸಿರಾಟ ಮಾರ್ಗ ಸೋಂಕು ಹಾಗೂ ಮೂತ್ರಪಿಂಡ ಸಮಸ್ಯೆಗಳಿಂದ ನಿನ್ನೆ 93 ವರ್ಷದ ವಾಜಪೇಯಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೆರಿಯಾ ನೇತೃತ್ವದ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ಮುಂದುವರಿಸಿದೆ. ನಿನ್ನೆ ಅವರ ಆರೋಗ್ಯ ಸ್ಥಿರವಾಗಿತ್ತು. ಆದರೆ, ಇಂದು ಬೆಳಗ್ಗೆಯಿಂದ ಅವರ ದೇಹಸ್ಥಿತಿ ವಿಷಮವಾಗಿದೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ ವಾಜಪೇಯಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ದೇಶದ ವಿವಿಧೆಡೆ ಹೋಮ-ಹವನ ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ.vajapey

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *