ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ರಾಷ್ಟ್ರ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ ಶಿಪ್ 4 ಚಿನ್ನ, 3 ಕಂಚು ಗೆದ್ದ ಕೊಡಗಿನ ಪ್ರತಿಭೆಗಳು

Posted on: June 13, 2018

Z-TAWKONDO
ಮಡಿಕೇರಿ : ಗೋವಾ ರಾಜ್ಯದ ಶ್ಯಾಮ್ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಜೂ. 8 ರಿಂದ ಜೂ. 10ರ ವರೆಗೆ ನಡೆದ ರಾಷ್ಟ್ರ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ ಶಿಪ್‍ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ 4 ಚಿನ್ನ ಹಾಗೂ 3 ಕಂಚಿನ ಪದಕ ದೊರಕಿದೆ ಎಂದು ಸಂಸ್ಥೆಯ ತರಬೇತುದಾರ ಬಿ.ಜಿ.ಲೋಕೇಶ್ ರೈ ತಿಳಿಸಿದ್ದಾರೆ.

ವಾಸ್ಕೋ ಟೆಕ್ವಾಂಡೊ ಅಕಾಡಮಿ, ಟೆಕ್ವಾಂಡೊ ಫೆಡರೇಶನ್ ಆಫ್ ಇಂಡಿಯಾ ಹಾಗೂ ಗೋವಾ ಟೆಕ್ವಾಂಡೊ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ರಾಷ್ಟ್ರಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ ಶಿಪ್‍ನಲ್ಲಿ ಭಾಗವಾಹಿಸಿದ್ದ ತಾನಿಯಾ ಭವಾನಿ ಶಂಕರ್ ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದು, ಬೈಲೆರಾ ಪ್ರೊನಿಕ್ಷಾ ವಿಶ್ವನಾಥ್ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ, ಬಿ.ಎಸ್.ದೃತಿ ಹೃಷಿಕಾ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
ಇವರೊಂದಿಗೆ ಪೂಜಾರಿರ ಬೃಹತ್ ಬೋಪಯ್ಯ, ಚಕ್ಕೇರ ಕಾರ್ಯಪ್ಪ, ಕಾರ್ತಿಕ್ ನಾಯಕ, ಚಂಡೀರ ಎಸ್. ಮೌರ್ಯ, ಮಿನ್ನಂಡ ಯಶಸ್ಸ್ ಹಾಗೂ ಎಂ.ಪಿ.ಪ್ರೀತಮ್ ಸ್ಪರ್ಧಿಸಿದ್ದು, ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *