ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಲಾರಿ ಕಾರು ಮುಖಾಮುಖಿ ಡಿಕ್ಕಿ ಮಹಿಳೆ ಸಾವು

Posted on: June 13, 2018

 WhatsApp Image 2018-06-13 at 12.10.39 PMಮಡಿಕೇರಿ: ಲಾರಿ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ರಸ್ತೆಯ ಆನೆಕಾಡು ಬಳಿ ನಡೆದಿದೆ.

ಮಡಿಕೇರಿ ಸಮೀಪದ ಕಾಟಕೇರಿ ನಿವಾಸಿ ಫಿಲೋಮಿನಾ ಎಂಬುವವರೇ ಮೃತ ದುರ್ದೈವಿ. ಕಾರ್ ಚಲಾಯಿಸುತ್ತಿದ್ದ ಇವರ ಪುತ್ರ ಯೋಧ ಪ್ರವೀಣ್ ಡ್ಯಾನಿಯಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಮೈಸೂರಿನ ಡೋರ್ನಳ್ಳಿ ಚರ್ಚ್ ಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಪ್ರವೀಣ್ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಲಾರಿಯನ್ನು ಕಾರು ಹಿಂದಿಕ್ಕುವ ಸಂದರ್ಭ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.WhatsApp Image 2018-06-13 at 12.09.55 PMWhatsApp Image 2018-06-13 at 12.10.04 PM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *