ವಸತಿ ರಹಿತ ಮತ್ತು ನಿವೇಶನ ರಹಿತರಿಂದ ಗ್ರಾ.ಪಂನಲ್ಲಿ ಅರ್ಜಿ ಸಲ್ಲಿಕೆ

Posted on: June 19, 2018

IMG_20180618_123820
ಕುಶಾಲನಗರ : ಕರ್ನಾಟಕ ರಾಜ್ಯ ಪಂಚಾಯತ್ ರಾಜ್ಯ ಇಲಾಖೆಯ ವತಿಯಿಂದ ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯ ಅಡಿಯಲ್ಲಿ ಕೊಡಗು ಜಿಲ್ಲೆಗೆ ಆಯಾ ಪಂಚಾಯ್ತಿ ವ್ಯಾಪ್ತಿಗೆ ಸೇರುವ ವಸತಿ ರಹಿತ ಹಾಗೂ ನಿವೇಶನ ರಹಿತರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅರ್ಜಿಗಳನ್ನು ಗ್ರಾಮ ಪಂಚಾಯ್ತಿಯ ವೆಬ್‍ಸೈಟ್‍ನಲ್ಲಿ ಆನ್‍ಲೈನ್‍ನಲ್ಲಿ ಕುಶಾಲನಗರ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತರು ಅರ್ಜಿ ಸಲ್ಲಿಸುತ್ತಿದ್ದಾರೆ.

ಈಗಾಗಲೇ ಒಂದೊಂದು ಗ್ರಾಮ ಪಂಚಾಯ್ತಿಗಳಲ್ಲಿ 300 ಕ್ಕೂ ಅಧಿಕ ಅರ್ಜಿಗಳು ಬಂದಿರುತ್ತವೆ. ಅರ್ಜಿಸಲ್ಲಿಸಲು ಇಂದು(ಜೂ20) ಕೊನೆಯ ದಿನವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಯಾ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾರೆ.

ಸಮೀಕ್ಷೆ ನಡೆಸುವ ಸಂದರ್ಭ ಆಯಾ ವಾರ್ಡಿನ ಸದಸ್ಯ ಸಹಕಾರದೊಂದಿಗೆ ಅರ್ಹ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು. ಇದುವರೆಗೆ ಸರ್ಕಾರದ ಯೋಜನೆಯು ಅರ್ಹ ಫಲಾನುಭವಿಗೆ ದೊರತಿಲ್ಲ ಎಂಬ ದೂರಿನ ಅನ್ವಯ ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯು ನಡೆಯುತ್ತಿದೆ. ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡುವ ಬದಲು ಈಗ ಆಯ್ಕೆಗೊಂಡ ಫಲಾನುಭವಿಗೆ ನಿವೇಶನ ನೀಡಲು ಗ್ರಾಮಸಭೆಯಲ್ಲಿ ಒಪ್ಪಿಗೆ ಪಡೆಯುವ ನಿಯಮವಿರುತ್ತದೆ. ನಂತರ ಈ ಪಟ್ಟಿಯನ್ನು ಆನ್‍ಲೈನ್ ಮೂಲಕ ಸರ್ಕಾರಕ್ಕೆ ಕಳುಹಿಸಿ, ಯೋಜನೆಯ ಸೌಲಭ್ಯಗಳನ್ನು ಒದಗಿಸುವ ಕ್ರಮವಾಗಿದೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಕೂಡುಮಂಗಳೂರು, ಮುಳ್ಳುಸೋಗೆ, ಹೆಬ್ಬಾಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವ ನಿವೇಶನ ರಹಿತ ಹಾಗೂ ವಸತಿ ರಹಿತರ ಅರ್ಜಿದಾರರ ಮಾಹಿತಿ ಪಡೆದು, ಸೌಲಭ್ಯ ಪಡೆಯಲು ಅರ್ಹರಾಗಿರುವರೇ ಎಂಬ ಮಾಹಿತಿಯನ್ನು ಕಲೆಹಾಕುವುದರಲ್ಲಿ ಆಯಾ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *