ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವಿದ್ಯುತ್ ಇಲ್ಲದೆ ನೀರಿಗಾಗಿ  ಪರದಾಟ ಗ್ರಾ.ಪಂ ವತಿಯಿಂದ ಜನರೇಟ್ ಮೂಲಕ ನೀರು ಸರಬರಾಜು

Posted on: June 13, 2018
  IMG-20180613-WA0013
ಚೆಟ್ಟಳ್ಳಿ : ಚೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಈರಳೆವಳಮುಡಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಭಾರಿ ಮಳೆಯಿಂದ ವಿದ್ಯುತ್ ಕಂಬಗಳು ಉರುಳಿ ಸಂಪರ್ಕ ಕಡಿತಗೊಂಡಿತ್ತು.ಗ್ರಾಮದ ಜನಕ್ಕೆ ನೀರಿಲ್ಲದೆ ಪರದಾಡುತಿರುವ ಪರಿಸ್ಥಿತಿಯಾಗಿದೆ. ಆದ್ದರಿಂದ ಗ್ರಾಮಪಂಚಾಯಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪನವರು ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಅಧ್ಯಕ್ಷರನ್ನು ಸಂಪರ್ಕಿಸಿ ನೀರಿನ ವ್ಯವಸ್ಥೆಗೆ ತಾತ್ಕಾಲಿಕವಾಗಿ ಜನರೇಟರನ್ನು ಒದಗಿಸಿಕೊಡುವಂತೆ ಮನವಿ ಮಾಡಿಕೊಂಡರು .ಅದರಂತೆ ಜನರೇಟರನ್ನು ತಂದು ಮೋಟಾರನ್ನು ಓಡಿಸುವ ಮೂಲಕ ಗ್ರಾಮಕ್ಕೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಯಿತು.
ವಿದ್ಯುತ್ ಇಲಾಖೆಗೆ ಹಲವು ಬಾರಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಮನವಿ ಮಾಡಿದರೂ ಈವರೆಗೂ  ಗಮನಿಸಿದ ಬಗ್ಗೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪನವರು ಅಸಮಾನ ವ್ಯಕ್ತಪಡಿಸಿದ್ದು ಶೀಘ್ರದಲ್ಲೇ ವ್ಯವಸ್ಥೆಯನ್ನು ಸರಿಪಡಿಸಿ ಕೊಡುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರಾದ  ಬಲ್ಲಾರಂಡ ದೇವಿದೇವಯ್ಯ ಹಾಗೂ ಕೊಕ್ಕೆರ ದೊರೆ ಹಾಜರಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *