ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸುರತ್ಕಲ್ ನಲ್ಲಿ ವ್ಯಕ್ತಿಯ ತುಂಡರಿಸಿದ ಮೃತದೇಹ ಚರಂಡಿಯಲ್ಲಿ ಪತ್ತೆ ಕೊಲೆ ಶಂಕೆ

Posted on: June 2, 2018

surathkal
ಮಂಗಳೂರು : ಸುರತ್ಕಲ್-ಕೃಷ್ಣಾಪುರ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಎರಡು ತುಂಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಪ್ಪಳ ಜಿಲ್ಲೆಯ ಕಬ್ಬರಗಿಯ ಮರಿಯಪ್ಪ ಎಂಬಾತನ ಶವ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಿಯಪ್ಪನ ಕೊಲೆ ಮಾಡಿ, ದೇಹವನ್ನು ಎರಡು ತುಂಡು ಮಾಡಲಾಗಿದೆ. ಅದನ್ನು ಗೋಣಿ ಚೀಲದಲ್ಲಿ ತುಂಬಿಸಿ ಮಳೆನೀರು ಕಾಲುವೆಗೆ ಹಾಕಲಾಗಿದೆ. ಶನಿವಾರ ಬೆಳಿಗ್ಗೆ ಶವ ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಮೇಲ್ನೋಟಕ್ಕೆ ಇದು ಕೊಲೆ ಎಂದು ಕಾಣುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಡಿಸಿಪಿ ಹನುಮಂತ್ರಾಯ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *