ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ – ಇಂಗ್ಲಿಷ್ ಕಲಿತ ಮಾತ್ರಕ್ಕೆ ಉನ್ನತ ಹುದ್ದೆಗೇರಲು ಸಾಧ್ಯವಿಲ್ಲ ಶಾಸಕ ಬೋಪಯ್ಯ

Posted on: June 11, 2018

Z-PRESS-CLUBಮಡಿಕೇರಿ : ಕನ್ನಡದಲ್ಲಿ ಎಷ್ಟೋ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಕೇವಲ ಇಂಗ್ಲಿಷ್ ಕಲಿತ ಮಾತ್ರಕ್ಕೆ ಉನ್ನತ ಹುದ್ದೆಗೇರಲು ಸಾಧ್ಯವಿಲ್ಲ ಎನ್ನುವ ಭ್ರಮೆ ಬೇಡ ಶಾಸಕ ಕೆ.ಜಿ ಬೋಪಯ್ಯ ತಿಳಿಸಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕೊಡಗು ಜಿಲ್ಲಾ ಪ್ರೆಸ್ ಕ್ಲಬ್ ವತಿಯಿಂದ ಕನ್ನಡ ಭಾಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಜಿ ಬೋಪಯ್ಯ ಕನ್ನಡ ಇತರ ಯಾವ ಭಾಷೆಗಳಿಗೂ ಕಡಿಮೆ ಇಲ್ಲ, ಮಾತೃ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಎಲ್ಲೆಡೆ ಆಗಬೇಕು ಪ್ರಸ್ತುತ ಇಂಗ್ಲಿಷ್ ಅನಿವಾರ್ಯವಾಗಿದ್ದು ಅದನ್ನು ವ್ಯಾವಹಾರಿಕವಾಗಿ ಮಾತ್ರ ಬಳಸಿಕೊಂಡು ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡಬೇಕೆಂದು ಕರೆ ನೀಡಿದರು.

ಅರಕಲಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ ಮಾತನಾಡಿ ಬುದ್ದಿವಂತಿಕೆ ಮತ್ತು ಸತ್ತ ಪರಿಶ್ರಮದಿಂದ ಮಾತ್ರ ಉತ್ತಮ ಅಂಕ ಗಳಿಸಲು ಸಾಧ್ಯವೆಂದು ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಯನ್ನು ಗುರಿಯನ್ನು ಮಾತ್ರ ಹೊಂದಿದ್ದಾರೆ ಜೀವನದ ಪರೀಕ್ಷೆಯಲ್ಲೂ ಗೆಲ್ಲಲು ಸಿದ್ಧರಾಗಬೇಕೆಂದು ಕಿವಿಮಾತು ಹೇಳಿದರು . ಹಿರಿಯ ವಿಚಾರಧಾರೆಗಳನ್ನು ಇಂದಿನ ಪೀಳಿಗೆ ಅರಿತಲ್ಲಿ ಜೀವನದಲ್ಲಿ ಯಶಸು ಸದ್ಯ ಎಂದರು.

ಅಧ್ಯಕ್ಷೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತ್ ಜಿಲ್ಲಾಧ್ಯಕ್ಷರಾದ ಬಿ.ಎಸ ಲೋಕೇಶ್ ಸಾಗರ್ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಗಣನೀಯವಾಗಿ ಹೆಚ್ಚು ಅಂಕಗಳನ್ನು ಗಳಿಸುತ್ತಾ ಬಂದಿದ್ದಾರೆ. ಇವರನ್ನು ಗುರುತಿಸುವಲ್ಲಿ ಸಾಹಿತ್ಯ ಪರಿಷತ್ ಕಾರ್ಯೋನ್ಮುಕವಾಗಿದ್ದು, ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ ಕೂಡಾ ಪ್ರೋತ್ಸಹ ನೀಡುತ್ತಾ ಬಂದಿದೆ ಎಂದರು ಇಂದು ಯಲ್ಲಿ 20 ವಿದ್ಯಾರ್ಥಿಗಳು ಎಸ್ .ಎಸ್ ಎಲ್. ಸಿ ಹಾಗೂ ಪಿಯುಸಿ ಯಲ್ಲಿ ಒಬ್ಬ ವಿದ್ಯಾರ್ಥಿಯನ್ನು ಸನ್ಮಾನಿಸಲಾಗುತ್ತಿದೆ. ಜೂನ್ 20ರೊಳಗೆ ಶುದ್ಧ ಕನ್ನಡ ಬರೆಯುವ ಮತ್ತು ಮಾತನಾಡುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ .ಎಸ್ ಎಲ್. ಸಿ ಯಲ್ಲಿ625  ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೊಡಗು ಮೂಲದ ಹಾಸನದ ಕಾವೇರಪ್ಪ ಹಾಗೂ ಕನ್ನಡಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು ಸೇರಿದಂತೆ ಹಿರಿಯ ಸಾಹಿತಿ ವಿಜಯ ವಿಷ್ಣುಭಟ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ , ಪ್ರೆಸ್ ಕ್ಲಬ್ ಉಪಾಧ್ಯಕ್ಷ ವಿಘ್ನೇಶ್ ಎಂ. ಭೂತಾನ್ ಕಾಡ್ , ಹಿರಿಯ ಶೀಟಿ ವಿಜಯ ವಿಷ್ಣುಭಟ್ , ಕಸಾಪ ಗೌರವ ಕಾರ್ಯದರ್ಶಿ ರಮೇಶ್ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *