ಆನೆ ಹಾವಳಿ ತಡೆಗೆ ಶಾಲಾ ಆಡಳಿತ ಮಂಡಳಿ ಮನವಿ

Posted on: July 11, 2018

IMG_8329

ಮಡಿಕೇರಿ : ಇತೀಚೆಗೆ ಸಿದ್ದಾಪುರ ಸಮೀಪದ ಗುಹ್ಯ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾಡಾನೆಗಳು ಕಾಣಿಸಿಕೊಂಡು ಪೋಷಕರಲ್ಲಿ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಜಿಲ್ಲಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದ್ದಾರೆ.

ಶಾಲಾ ಎಸ್.ಡಿ.ಎಂ ಸದಸ್ಯರು ಹಾಗೂ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿಯವರನ್ನು ಭೇಟಿ ಮಾಡಿ ಕಾಡಾನೆ ಸಮಸ್ಯೆ ಬಗ್ಗೆ ವಿವರಿಸಿದರು. ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಶಾಲಾ ಆವರಣದಲ್ಲೇ ಕಾಡಾನೆಗಳು ಬಂದು ಹೋಗುತ್ತಿದ್ದು ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಭಯಭೀತರಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದ್ದಾರೆ.IMG_8327-1

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣಾಧಿಕಾರಿಗಳು ಕಾಡಾನೆ ಹಾವಳಿ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಶಾಲಾ ಆವರಣದ ಸುತ್ತಲೂ ಸೋಲಾರ್ ಬೇಲಿ ಅಳವಡಿಸುವ ಕುರಿತು ಚರ್ಚೆಯಾಗಿದೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಪ್ರಸನ್ನ ಕುಮಾರಿ, ಶಿಕ್ಷಕರಾದ ಮಣಿಕಂಠ, ರಘು, ತೆರೇಸಾ, ಮಂಜುಳಾ, ನೇತ್ರಾವತಿ, ಸಿದ್ದಾಪುರ ಗ್ರಾ.ಪಂ ಸದಸ್ಯ ರೆಜಿತ್ ಕುಮಾರ್, ಎಸ್.ಡಿ.ಎಂ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ದಶರಥ,ಮುತ್ತು ಮತ್ತಿತರರು ಹಾಜರಿದ್ದರು.

IMG_8325

WhatsApp Image 2018-07-10 at 7.03.41 AM

WhatsApp Image 2018-07-10 at 7.03.46 AM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *