ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಶ್ರೀಆಂಜನೇಯ ದೇವಾಲಯದಲ್ಲಿ ಕಳ್ಳತನ ನಾಲ್ವರ ಬಂಧನ

Posted on: July 25, 2018

Z-CRIME-1

ಮಡಿಕೇರಿ : ನಗರದ ಶ್ರೀಆಂಜನೇಯ ದೇವಾಲಯದ ಹುಂಡಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುಂಟಿಕೊಪ್ಪ ಹಾಲೇರಿಯ ನಿವಾಸಿ ಸುರೇಶ್, ಕೇರಳ ಕಾಂಞಗಾಡ್ ನಿವಾಸಿ ಸುಭಾಷ್, ಹುಣಸೂರಿನ ನಿವಾಸಿ ಸುರೇಶ್ ನಾರಾಯಣ್, ಹಾಸನದ ದೊಡ್ಡಮಗ್ಗೆ ಹೋಬಳಿಯ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದೇ ಜು.21 ರಂದು ಆರೋಪಿಗಳು ನಗರದ ಆಂಜನೇಯ ದೇವಾಲಯದ ಬೀಗ ಮುರಿದು ಒಳನುಗ್ಗಿ ಹುಂಡಿಯ ಹಣವನ್ನು ಕಳವು ಮಾಡಿದ್ದರು. ಅಲ್ಲದೆ ಸಮೀಪದ ವ್ಯಾಂಡಮ್ ಎಂಟರ್ ಪ್ರೈಸಸ್ ಎದುರು ನಿಲ್ಲಿಸಿದ್ದ ಬೈಕನ್ನು ಕದ್ದು ಪರಾರಿಯಾಗಿದ್ದರು. ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್ ಅವರು ನೀಡಿದ ಲಿಖಿತ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು ವ್ಯಾಂಡಮ್ ಎಂಟರ್ ಪ್ರೈಸಸ್‍ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಿಂದ ಆಂಜನೇಯ ದೇವಾಲಯದಲ್ಲಿ ಕಳವಾಗಿದ್ದ ರೂ.32 ಸಾವಿರ ನಗದು ಹಾಗೂ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಈ ಹಿಂದೆ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಗಳಾಗಿದ್ದು, ಅನೇಕ ವರ್ಷಗಳ ಕಾಲ ಸೆರೆ ವಾಸವನ್ನೂ ಅನುಭವಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *