ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Posted on: August 14, 2018

body
ಮಡಿಕೇರಿ  :  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬಾಡಗ ಗ್ರಾಮದ ತೋಟವೊದರಲ್ಲಿ ಪುರುಷ ವ್ಯಕ್ತಿಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 40 ರಿಂದ 50 ವರ್ಷ ಪ್ರಾಯದ ವ್ಯಕ್ತಿಯು ಕಪ್ಪು ಬಣ್ಣದ ಪ್ಯಾಂಟ್, ನೀಲಿ ಶ್ವೆಟರ್ ಹಾಗೂ ಬಿಳಿ ಬಣ್ಣದ ಬನಿಯಾನ್ ಧರಿಸಿದ್ದು, ತೋಟದ ರೈಟರ್ ರವಿಚಂದ್ರ ಅವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತ ಠಾಣಾಧಿಕಾರಿ ತಿಳಿಸಿದ್ದಾರೆ.

ಸುಮಾರು 20 ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದ್ದು, ನಾಪತ್ತೆ ಪ್ರಕರಣ ದಾಖಲಿಸಿರುವವರು ಅಥವಾ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ಮಡಿಕೇರಿ ಗ್ರಾಮಾಂತರ ಠಾಣೆ ಅಥವಾ ಈ ದೂರವಾಣಿ ಸಂಖ್ಯೆ 08272 228777, 94808 04946 ನ್ನು ಸಂಪರ್ಕಿಸಬಹುದಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *