ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಜೀಪು ಡಿಕ್ಕಿ ಸವಾರ ಗಂಭೀರ

Posted on: August 9, 2018

01-1
ಕುಶಾಲನಗರ : ಜೀಪೊಂದು ದ್ವಿಚಕ್ರ ವಾಹನದ ಹಿಂಬದಿಗೆ ಡಿಕ್ಕಿಯೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೆಕಾಡು ಬಳಿ ಸಂಭವಿಸಿದೆ.

ಸುಂಟಿಕೊಪ್ಪ ಕಡೆಯಿಂದ ಕುಶಾಲನಗರಕ್ಕೆ ಆಗಮಿಸಿದ್ದ ಕಲ್ಲೂರಿನ ರಾಜಗೋಪಾಲ್ ಎಂಬುವವರ (KA.12.Q.8834) ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬರುತ್ತಿದ್ದ ಜೀಪು (KA.12.Z.4539) ಘಟನೆಯಲ್ಲಿ ರಾಜಗೋಪಾಲ್ ಅವರಿಗೆ ಹಾಗೂ ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ತೋಟದ ಕಾರ್ಮಿಕರನ್ನು ಕರೆಯುತ್ತಿದ್ದ ಜೀಪು ಚಾಲಕ 7ನೇ ಹೊಸಕೋಟೆಯ ಮಹ್ಮದ್ ಎಂಬಾತ ಅತೀವೇಗದ ಚಾಲನೆ ಘಟನೆಗೆ ಕರಣ ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಜೀಪು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದಿದ್ದು ಜೀಪಿನಲ್ಲಿದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈವೇ ಪಾಟ್ರೋಲ್ ನ ಎಎಸೈ ಶಿವಪ್ಪ, ಎಆರ್.ಎಸ್ಐ ಕುಮಾರ್,ಸಂಚಾರಿ ಪೊಲೀಸ್ ಠಾಣೆಯ ಸಹದೇವ್ ವಾಹನಗಳನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಭಂದ ಸಂಚಾರಿ ಪೊಲೀಸ್ ಪ್ರಕರಣ ದಾಖಲಾಗಿದೆ.

06

09

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *